ರಾಜ್ಯ

ಪ್ರಹ್ಲಾದ್‌ ಜೋಶಿ ಬದಲಾವಣೆ ಸಾಧ್ಯವಿಲ್ಲ: ಬಿ.ಎಸ್‌ ಯಡಿಯೂರಪ್ಪ

ಹುಬ್ಬಳ್ಳಿ: ಮುಂಬರುವ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ್‌ ಜೋಶಿ ಅವರನ್ನು ಸ್ಥಳಾಂತರಿಸಬೇಕು ಎಂಬ ವೀರಶೈವ-ಲಿಂಗಾಯಿತ ಸ್ವಾಮೀಜಿಗಳ ಒತ್ತಾಯವನ್ನು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌ ಯಡಿಯೂರಪ್ಪ ತಿರಸ್ಕರಿಸಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ್‌ ಜೋಶಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಶಿರಹಟ್ಟಿ ಫಕೀರ ದಿಂಗಾಲೇಶ್ವ ಸ್ವಾಮೀಜಿ ಜೋಶಿ ಅವರ ಬಗ್ಗೆ ಬಹುಶಃ ತಪ್ಪಾಗಿ ತಿಳಿದಿರಬೇಕು. ಸ್ವಾಮೀಜಿಗಳ ಮನವೊಲಿಸುವ ಕೆಲಸ ಮಾಡಲಾಗುವುದು ಎಂದರು.

ಎಲ್ಲಾ ಸಮಾಜದ ಸ್ವಾಮಿಗಳು ಜೋಶಿ ಅವರ ಪರವಾಗಿದ್ದಾರೆ. ಅವರು ಒಬ್ಬ ಜನಪ್ರಿಯ ನಾಯಕರಾಗಿದ್ದು, ಈ ಬಾರಿ ಬಹು ದೊಡ್ಡ ಅಂತರದಿಂದ ಜಯ ಗಳಿಸುವ ವಿಶ್ವಾಸವಿದೆ. ಸ್ವಾಮೀಜಿ ಅವರ ಈ ಆರೋಪದ ಹಿಂದೆ ನಮ್ಮ ಪಕ್ಷದವರು ಯಾರೂ ಇಲ್ಲ. ಇವೆಲ್ಲವೂ ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದರು.

ಜೋಶಿ ಅವರ ನಾಯಕತ್ವವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿಕೊಂಡು, ಸಂಪುಟದಲ್ಲಿ ಉನ್ನತ ಸ್ಥಾನ ನೀಡಿದ್ದಾರೆ. ನೋಡುವವರಲ್ಲಿ ಕೆಲವೊಂದು ತಪ್ಪು ತಿಳುವಳಿಕೆ ಇದ್ದಿರಬಹುದು. ಎಲ್ಲರೊಂದಿಗೂ ಮಾತನಾಡಿ ಸಮಸ್ಯೆ ಪರಿಹರಿಸಲಾಗುವುದು ಎಂದು ಮಾಜಿ ಸಿಎಂ ಬಿಎಸ್‌ವೈ ಇದೇ ಸಂದರ್ಭದಲ್ಲಿ ಹೇಳಿದರು.

ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು, ಧಾರವಾಡ ಕ್ಷೇತ್ರಕ್ಕೆ ಪ್ರಹ್ಲಾದ್‌ ಜೋಶಿ ಬದಲಿಗೆ ಸೂಕ್ತ ಅಭ್ಯರ್ಥಿಯನ್ನು ಹಾಕಬೇಕು. ಇದಕ್ಕೆ ಮಾರ್ಚ್‌ 31 ಕೊನೆಯ ದಿನಾಂಕ. ಬದಲಾಯಿಸದೇ ಇದ್ದರೇ ಏಪ್ರಿಲ್ 2ರಂದು ಮತ್ತೆ ಸಭೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

2 hours ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

2 hours ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

2 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

3 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

3 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

17 hours ago