Mysore
17
few clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಜ.೨೨ ರಂದು ಸರ್ಕಾರಿ ರಜೆ ನೀಡುವಂತೆ ʼಸಿಎಂʼಗೆ ಕನ್ನಡ ಪರ ಸಂಘಟನೆಗಳ ಮನವಿ!

ಬೆಂಗಳೂರು : ಜನವರಿ 22 ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸುವಂತೆ ಸಿಎಂ ಸಿದ್ದರಾಮಯ್ಯಗೆ ಕನ್ನಡಪರ ಸಂಘಟನೆಗಳು ಮನವಿ ಸಲ್ಲಿಸಿದೆ.

ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಕನ್ನಡಪರ ಸಂಘಟನೆಗಳು ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಇರುವುದರಿಂದ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಿ ಎಂದು ಸಂಘಟನೆಗಳು ಮನವಿ ಸಲ್ಲಿಸಿದೆ.

ಜನವರಿ 22ರಂದು ಅಯೋಧ್ಯೆ ಶ್ರೀ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನೆರವೇರಲಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರ ಜ. 22 ರಂದು ಅರ್ಧ ದಿನ ರಜೆ ಘೋಷಿಸಿದೆ. ಅನೇಕ ರಾಜ್ಯಗಳು ಅರ್ಧ ದಿನ ರಜೆ ಘೋಷಣೆ ಮಾಡಿವೆ. ರಾಜ್ಯದಲ್ಲಿಯೂ ಸರ್ಕಾರ ರಜೆ ಘೋಷಿಸಬೇಕು.

ಹಿಂದೂಗಳು ಪ್ರಾಣ ಪ್ರತಿಷ್ಠಾಪನೆ ವೀಕ್ಷಿಸಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದ್ದಾರೆ. ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಕೂಡ ಜನವರಿ 22ರಂದು ರಜೆ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!