ಬೆಂಗಳೂರು : ಜನವರಿ 22 ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸುವಂತೆ ಸಿಎಂ ಸಿದ್ದರಾಮಯ್ಯಗೆ ಕನ್ನಡಪರ ಸಂಘಟನೆಗಳು ಮನವಿ ಸಲ್ಲಿಸಿದೆ.
ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಕನ್ನಡಪರ ಸಂಘಟನೆಗಳು ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಇರುವುದರಿಂದ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಿ ಎಂದು ಸಂಘಟನೆಗಳು ಮನವಿ ಸಲ್ಲಿಸಿದೆ.
ಜನವರಿ 22ರಂದು ಅಯೋಧ್ಯೆ ಶ್ರೀ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನೆರವೇರಲಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರ ಜ. 22 ರಂದು ಅರ್ಧ ದಿನ ರಜೆ ಘೋಷಿಸಿದೆ. ಅನೇಕ ರಾಜ್ಯಗಳು ಅರ್ಧ ದಿನ ರಜೆ ಘೋಷಣೆ ಮಾಡಿವೆ. ರಾಜ್ಯದಲ್ಲಿಯೂ ಸರ್ಕಾರ ರಜೆ ಘೋಷಿಸಬೇಕು.
ಹಿಂದೂಗಳು ಪ್ರಾಣ ಪ್ರತಿಷ್ಠಾಪನೆ ವೀಕ್ಷಿಸಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದ್ದಾರೆ. ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಕೂಡ ಜನವರಿ 22ರಂದು ರಜೆ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…