Mysore
17
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಬರ ಪರಿಹಾರ ಕುರಿತು ಪ್ರಮುಖ ನಾಯಕರ ಪರ-ವಿರೋಧದ ಹೇಳಿಕೆ !

ಬೆಂಗಳೂರು : ರಾಜ್ಯ ಬರ ಪರಿಹಾರ ಬಿಡುಗೆಡೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ೩೪೫೪ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪರಿಹಾರ ಬಿಡುಗಡೆ ಮಾಡಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿತು.

ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯಲ್ಲಿ ರಾಜ್ಯಕ್ಕೆ ಒಟ್ಟಾರೆ ೧೮೧೭೨ ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿತ್ತು.
ಆದರೆ ಇದೀಗ ಸುಪ್ರೀಂ ಕೋರ್ಟ್‌ ಸೂಚನೆಯ ಮೇರೆಗೆ ಕೇವಲ ೩೪೫೪ ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿದೆ.

ಕೋರ್ಟ್‌ ಆದೇಶದ ಮೇರೆಗೆ ಒಂದು ವಾರದಲ್ಲಿ ಹಣ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಕೋರ್ಟ್‌ಗೆ ತಿಳಿಸಿತ್ತು. ಅಂತೆಯೆ ಹಣ ಬಿಡುಗಡೆ ಮಾಡಿದೆ. ಆದರೆ ಮನವಿ ಮಡಿದ್ದಷ್ಟು ಹಣವನ್ನು ಬಿಡುಗಡೆ ಮಾಡಿಲ್ಲವೆಂದು ರಾಜ್ಯ ಕಾಂಗ್ರೆಸ್‌ ನಾಯಕರು ಕಿಡಿಕಾರಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌, ಕಾನೂನಾತ್ಮಕವಾಗಿ ಡಿಸೆಂಬರ್‌ ತಿಂಗಳೀನಲ್ಲಿ ಬಿಡುಗಡೆ ಮಾಡಬೇಕಾಗಿದ್ದ ಬರ ಪರಿಹಾರವನ್ನು ನೀಡದೆ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿತ್ತು.

ಅಂತಿಮವಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೋಗಿ ಆ ಮುಖಾಂತರವಾಗಿ ಪರಿಹಾರ ನೀಡುವಂತೆ ಮಾಡಿದ್ದೇವೆ. ಈ ಮೂಲಕ ಬಿಜೆಪಿಯ ಮೋಸ ಹೊರಗೆ ಬಂದಿದೆ ಎಂದರು. ಜನರ ಹಿತಕ್ಕೆ ಸಂಬಂಧಪಟ್ಟ ವಿಚಾರಗಳಲ್ಲಿ ಸೇಡಿನ ರಾಜಕಾರಣ ಬಿಟ್ಟುಬಿಡಿ ಎಂದು ಕಿವಿ ಮಾತು ಹೇಳಿದರು.

ಕೇಳಿದಷ್ಟು ಕೊಡಲು ಸಾಧ್ಯವೇ : ಹೆಚ್‌.ಡಿ.ಕುಮಾರಸ್ವಾಮಿ !
ಕೇಂದ್ರ ಸ್ರಕಾರ ಬಿಡುಗಡೆ ಮಾಡಿರುವ ಬರ ಪರಿಹಾರ ಹಣ ಸಾಕಾಗಲ್ಲ ಎಂದರೆ ಇವರು ಕೇಳಿದಷ್ಟು ಹಣ ಕೋಡಲು ಸಾಧ್ಯವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಕಡಿಕಾರಿದ್ದಾರೆ. ರಾಜ್ಯ ಸರ್ಕಾರ ಮನವಿ ಮಾಡಿದಷ್ಟು ಬರ ಪರಿಹಾರ ಹಣ ಕೇಂದ್ರ ನೀಡಿಲ್ಲವೆಂದು ಕೈ ನಾಯಕರು ಆರೋಪಿಸುತ್ತಿರುವ ಬೆನ್ನಲ್ಲೆ ಹೆಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

 

Tags:
error: Content is protected !!