ಬೆಂಗಳೂರು : ರಾಜ್ಯ ಬರ ಪರಿಹಾರ ಬಿಡುಗೆಡೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ೩೪೫೪ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪರಿಹಾರ ಬಿಡುಗಡೆ ಮಾಡಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿತು.
ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯಲ್ಲಿ ರಾಜ್ಯಕ್ಕೆ ಒಟ್ಟಾರೆ ೧೮೧೭೨ ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿತ್ತು.
ಆದರೆ ಇದೀಗ ಸುಪ್ರೀಂ ಕೋರ್ಟ್ ಸೂಚನೆಯ ಮೇರೆಗೆ ಕೇವಲ ೩೪೫೪ ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿದೆ.
ಕೋರ್ಟ್ ಆದೇಶದ ಮೇರೆಗೆ ಒಂದು ವಾರದಲ್ಲಿ ಹಣ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಕೋರ್ಟ್‌ಗೆ ತಿಳಿಸಿತ್ತು. ಅಂತೆಯೆ ಹಣ ಬಿಡುಗಡೆ ಮಾಡಿದೆ. ಆದರೆ ಮನವಿ ಮಡಿದ್ದಷ್ಟು ಹಣವನ್ನು ಬಿಡುಗಡೆ ಮಾಡಿಲ್ಲವೆಂದು ರಾಜ್ಯ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ಕಾನೂನಾತ್ಮಕವಾಗಿ ಡಿಸೆಂಬರ್ ತಿಂಗಳೀನಲ್ಲಿ ಬಿಡುಗಡೆ ಮಾಡಬೇಕಾಗಿದ್ದ ಬರ ಪರಿಹಾರವನ್ನು ನೀಡದೆ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿತ್ತು.
ಅಂತಿಮವಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೋಗಿ ಆ ಮುಖಾಂತರವಾಗಿ ಪರಿಹಾರ ನೀಡುವಂತೆ ಮಾಡಿದ್ದೇವೆ. ಈ ಮೂಲಕ ಬಿಜೆಪಿಯ ಮೋಸ ಹೊರಗೆ ಬಂದಿದೆ ಎಂದರು. ಜನರ ಹಿತಕ್ಕೆ ಸಂಬಂಧಪಟ್ಟ ವಿಚಾರಗಳಲ್ಲಿ ಸೇಡಿನ ರಾಜಕಾರಣ ಬಿಟ್ಟುಬಿಡಿ ಎಂದು ಕಿವಿ ಮಾತು ಹೇಳಿದರು.
ಕೇಳಿದಷ್ಟು ಕೊಡಲು ಸಾಧ್ಯವೇ : ಹೆಚ್.ಡಿ.ಕುಮಾರಸ್ವಾಮಿ !
ಕೇಂದ್ರ ಸ್ರಕಾರ ಬಿಡುಗಡೆ ಮಾಡಿರುವ ಬರ ಪರಿಹಾರ ಹಣ ಸಾಕಾಗಲ್ಲ ಎಂದರೆ ಇವರು ಕೇಳಿದಷ್ಟು ಹಣ ಕೋಡಲು ಸಾಧ್ಯವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಡಿಕಾರಿದ್ದಾರೆ. ರಾಜ್ಯ ಸರ್ಕಾರ ಮನವಿ ಮಾಡಿದಷ್ಟು ಬರ ಪರಿಹಾರ ಹಣ ಕೇಂದ್ರ ನೀಡಿಲ್ಲವೆಂದು ಕೈ ನಾಯಕರು ಆರೋಪಿಸುತ್ತಿರುವ ಬೆನ್ನಲ್ಲೆ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…