Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಪಾಕ್‌ ಪರ ಘೋಷಣೆ ಕೂಗಿರುವುದು ಎಫ್‌ಎಸ್‌ಎಲ್‌ ವರದಿಯಲ್ಲಿ ದೃಢ: ಗೃಹ ಸಚಿವ

ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ದೃಢವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಕ್‌ ಪರ ಘೋಷಣೆ ಕೂಗಿರುವುದು ದೃಢವಾಗಿದೆ. ಆದರೆ ಯಾರು ಕೂಗಿದ್ದಾರೆ ಎಂಬುದು ಬಹಿರಂಗಗೊಂಡಿಲ್ಲ. ಆರೋಪಿಗಳ ಬಂಧನದಿಂದ ಕಾಂಗ್ರೆಸ್‌ ಸರ್ಕಾರಕ್ಕೆ ಯಾವುದೇ ಮುಜುಗರವಿಲ್ಲ. ಯಾರೇ ಆಗಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ನಾನು ಹೇಳುತ್ತಿದ್ದೆ ಎಫ್​ಎಸ್​ಎಲ್​ ವರದಿ ಬರಲಿ ಕ್ರಮ ಕೈಗೊಳ್ಳುತ್ತೇವೆ ಅಂತ. ಖಾಸಗಿಯವರು ಕೂಡ ಎಫ್​ಎಸ್​ಎಲ್​​ ವರದಿ ಬಿಡುಗಡೆ ಮಾಡಿದ್ದರು. ಆದರೆ ಇದನ್ನು ಅಧಿಕೃತ ಅಂತ ಹೇಳಲು ಆಗಲ್ಲ. ನಮ್ಮ ಗೃಹ ಇಲಾಖೆಯ ಎಫ್​ಎಸ್​ಎಲ್​ ವರದಿ ಆಧಾರದ ಮೇಲೆ ಬಂಧನ ಮಾಡಿದ್ದೇವೆ‌. ಪೊಲೀಸರು ಮುಂದಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಇನ್ನು ವಿರೋಧ ಪಕ್ಷದವರು ಸುಮ್ಮನೇ ಹೇಳುತ್ತಿರುತ್ತಾರೆ. ಅವರು ಹೇಳುತ್ತಾರೆ ಅಂತ ಬಂಧಿಸಲಾಗುತ್ತಾ ? ಮಂಡ್ಯದಲ್ಲಿ ಬಿಜೆಪಿಯವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಹೀಗಾಗಿ ಕ್ರಮ ಕೈಗೊಂಡಿದ್ದೇವೆ. ಯಾವ ಕಾರಣಕ್ಕೆ ಕೂಗಿದ್ದಾರೆಂದು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ. ನ್ಯಾಯ ಅನ್ನೋದು ಎಲ್ಲರಿಗೂ ಒಂದೇ ಅಲ್ವಾ? 2022ರಲ್ಲಿ ನಾವು ಅಧಿಕಾರದಲ್ಲಿ ಇರಲಿಲ್ಲ. ನಾವು ಹಳೆಯ ಪ್ರಕರಣ ಗಮನಿಸಿರಲಿಲ್ಲ. ಈಗ ಗಮನಿಸಿ ಪ್ರಕರಣ ದಾಖಲಾಗಿದೆ. ಮಂಡ್ಯದಲ್ಲಿ ಎಫ್​ಐಆರ್​ ಆಗಿದ್ದು, ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ