ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ದೃಢವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಕ್ ಪರ ಘೋಷಣೆ ಕೂಗಿರುವುದು ದೃಢವಾಗಿದೆ. ಆದರೆ ಯಾರು ಕೂಗಿದ್ದಾರೆ ಎಂಬುದು ಬಹಿರಂಗಗೊಂಡಿಲ್ಲ. ಆರೋಪಿಗಳ ಬಂಧನದಿಂದ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಮುಜುಗರವಿಲ್ಲ. ಯಾರೇ ಆಗಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ನಾನು ಹೇಳುತ್ತಿದ್ದೆ ಎಫ್‌ಎಸ್‌ಎಲ್ ವರದಿ ಬರಲಿ ಕ್ರಮ ಕೈಗೊಳ್ಳುತ್ತೇವೆ ಅಂತ. ಖಾಸಗಿಯವರು ಕೂಡ ಎಫ್‌ಎಸ್‌ಎಲ್ ವರದಿ ಬಿಡುಗಡೆ ಮಾಡಿದ್ದರು. ಆದರೆ ಇದನ್ನು ಅಧಿಕೃತ ಅಂತ ಹೇಳಲು ಆಗಲ್ಲ. ನಮ್ಮ ಗೃಹ ಇಲಾಖೆಯ ಎಫ್‌ಎಸ್‌ಎಲ್ ವರದಿ ಆಧಾರದ ಮೇಲೆ ಬಂಧನ ಮಾಡಿದ್ದೇವೆ. ಪೊಲೀಸರು ಮುಂದಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಇನ್ನು ವಿರೋಧ ಪಕ್ಷದವರು ಸುಮ್ಮನೇ ಹೇಳುತ್ತಿರುತ್ತಾರೆ. ಅವರು ಹೇಳುತ್ತಾರೆ ಅಂತ ಬಂಧಿಸಲಾಗುತ್ತಾ ? ಮಂಡ್ಯದಲ್ಲಿ ಬಿಜೆಪಿಯವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಹೀಗಾಗಿ ಕ್ರಮ ಕೈಗೊಂಡಿದ್ದೇವೆ. ಯಾವ ಕಾರಣಕ್ಕೆ ಕೂಗಿದ್ದಾರೆಂದು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ. ನ್ಯಾಯ ಅನ್ನೋದು ಎಲ್ಲರಿಗೂ ಒಂದೇ ಅಲ್ವಾ? 2022ರಲ್ಲಿ ನಾವು ಅಧಿಕಾರದಲ್ಲಿ ಇರಲಿಲ್ಲ. ನಾವು ಹಳೆಯ ಪ್ರಕರಣ ಗಮನಿಸಿರಲಿಲ್ಲ. ಈಗ ಗಮನಿಸಿ ಪ್ರಕರಣ ದಾಖಲಾಗಿದೆ. ಮಂಡ್ಯದಲ್ಲಿ ಎಫ್ಐಆರ್ ಆಗಿದ್ದು, ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ ಎಂದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…