cm siddaramaiah
ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕು ಎಂಬ ಹಲವು ವರ್ಷಗಳ ಬೇಡಿಕೆ ಶೀಘ್ರದಲ್ಲೇ ನೆರವೇರುವ ಎಲ್ಲಾ ಸಾಧ್ಯತೆಗಳು ಕಂಡುಬಂದಿವೆ.
ಸದ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಿಎಂ ಬಳಿಯೇ ಇದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ನಾಳೆ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಭೆ ಕರೆದಿದೆ.
ಇದನ್ನೂ ಓದಿ: ರಂಗೇರಿದ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ ಮೊದಲು ಸಿಡಿಮದ್ದು ತಾಲೀಮು
ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಗೆ ಅಗತ್ಯ ದಾಖಲೆಗಳನ್ನು ತರುವಂತೆ ನಾಲ್ಕು ಇಲಾಖೆಗಳ ಪತ್ರದ ಮುಖಾಂತರ ಸೂಚನೆ ನೀಡಲಾಗಿದೆ.
ಸೂಚನಾ ಪತ್ರದಲ್ಲಿ 2 ವಿಚಾರಗಳ ಬಗ್ಗೆ ಚರ್ಚೆ ನಡೆದಿದ್ದು, ಮೊದಲಿಗೆ ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆಗೊಳಿಸುವ ವಿಚಾರಗಳ ಬಗ್ಗೆ ಕೆಲ ಜಿಲ್ಲೆಗಳಲ್ಲಿ ಉಲ್ಲೇಖ ಮಾಡಲಾಗಿದೆ.
ಈ ಮೂಲಕ ಮತ್ತೊಂದು ರಾಜಕೀಯ ಗುದ್ದಾಟಕ್ಕೆ ವೇದಿಕೆ ಸಿದ್ಧ ಮಾಡಿದ್ರಾ ಸಿಎಂ ಸಿದ್ದರಾಮಯ್ಯ ಎನ್ನುವ ಪ್ರಶ್ನೆಯೂ ಹುಟ್ಟಿಕೊಂಡಿದೆ.
ಇನ್ನು ರಾಜ್ಯ ಸರ್ಕಾರ ಕಳೆದ 2023ರಲ್ಲೇ ಕ್ಯಾಬಿನೆಟ್ ಸಭೆಯಲ್ಲಿ ಕುರುಬರನ್ನು ಎಸ್‌ಟಿಗೆ ಸೇರಿಸುವ ತೀರ್ಮಾನ ಕೈಗೊಂಡಿತ್ತು. ಅದರಂತೆ ಮೈಸೂರಿನ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ಕುರುಬ ಸಮುದಾಯದ ಜನಾಂಗೀಯ ಅಧ್ಯಯನ ನಡೆಸಿದ ವರದಿಯನ್ನು ಕಳುಹಿಸಲಾಗಿತ್ತು. ಇದೀಗ ಈ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…