ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗ ಕರ್ತೃ, ಸಂಶೋಧಕ, ಅನುವಾದಕ, ವಿಮರ್ಶಕ, ಕವಿ ಪ್ರೊ. ಅಮೃತ ಸೋಮೇಶ್ವರ ಅವರು ಇಂದು ( ಜನವರಿ 6 ) ಸೋಮೇಶ್ವರದಲ್ಲಿನ ತಮ್ಮ ಸ್ವಗೃಹ ʼಒಲುಮೆʼಯಲ್ಲಿ ನಿಧನ ಹೊಂದಿದ್ದಾರೆ.
ಸಮಾಜಮುಖಿ ಚಿಂತನೆಯುಳ್ಳ ಸಾಹಿತಿಯಾಗಿದ್ದ ಅಮೃತ ಸೋಮೇಶ್ವರ ಅವರು 1935ರ ಸೆಪ್ಟೆಂಬರ್ 27ರಂದು ಜನಿಸಿದ್ದರು. ಸೋಮೇಶ್ವರದ ಅಡ್ಕ ನಿವಾಸಿಯಾಗಿರುವ ಅಮೃತ ಸೋಮೇಶ್ವರ ತಮ್ಮ ಬಾಲ್ಯವನ್ನು ಮುಂಬೈನಲ್ಲಿ ಕಳೆದರು. ಬಳಿಕ ಐದು ವರ್ಷ ವಯಸ್ಸಿನವರಿದ್ದಾಗ ಊರಿಗೆ ಮರಳಿದ ಇವರು ಐದನೇ ತರಗತಿವರೆಗೆ ಕೋಟೆಕಾರಿನಲ್ಲಿರುವ ಸ್ಟೆಲಾ ಮೇರೀಸ್ ಪ್ರಾಥಮಿಕ ಶಾಲೆಯಲ್ಲಿ ಐದನೇ ತರಗತಿವರೆಗೂ ವ್ಯಾಸಂಗ ಮಾಡಿದರು. \
ಬಳಿಕ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಆರನೇ ತರಗತಿ ಕಲಿಕೆಯನ್ನು ಮುಂದುವರಿಸಿದ ಅಮೃತ ಸೋಮೇಶ್ವರ 1954ರಲ್ಲಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದರು. ಸಾಹಿತ್ಯದಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದ ಅಮೃತ ಸೋಮೇಶ್ವರ ಅವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ಇದರ ಜತೆಗೆ ಯಕ್ಷಗಾನ ಪ್ರಸಂಗಗಳನ್ನೂ ಸಹ ರಚಿಸಿರುವ ಇವರು ಅನೇಕ ಧ್ವನಿಸುರುಳಿಗಳಿಗೆ ಸಾಹಿತ್ಯ ಬರೆದಿದ್ದಾರೆ. ಅಮೃತ ಸೋಮೇಶ್ವರ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…