ಬೆಂಗಳೂರು: ರಾಜೀವ್ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಸೂಚನೆ ನೀಡಿದರು.
ಗುರುವಾರ ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಿಎಂ, ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು ಎಂದು ಸೂಚಿಸಿದರು.
ಪ್ರಸ್ತುತ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ ರೂ.400 ಕೋಟಿ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ ರೂ.130 ಕೋಟಿ ಅನುದಾನ ಒದಗಿಸಲಾಗಿದೆ. ಈ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಎಂದು ನಿರ್ದೇಶನ ನೀಡಿದರು.
2024-25 ನೇ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ರೂ.4331 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಇದುವರೆಗೆ ರೂ.3099 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ರೂ.3005 ಕೋಟಿ ವೆಚ್ಚ ಮಾಡಲಾಗಿದ್ದು, ಬಿಡುಗಡೆ ಮೊತ್ತಕ್ಕೆ ಶೇ. 96.97 ಪ್ರಗತಿ ಸಾಧಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಸಭೆಯ ಇತರೆ ಮುಖ್ಯಾಂಶಗಳು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…