ರಾಜ್ಯ

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಅವಕಾಶ ಕಲ್ಪಿಸುವ ‘ಇವ ನಮ್ಮವ ಇವ ನಮ್ಮವ’ ಎಂಬ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ರಾಜ್ಯದಲ್ಲಿ ಮರ್ಯಾದೆ ಹೆಸರಿನಲ್ಲಿ ಹತ್ಯೆ ಮತ್ತು ಹಲ್ಲೆಗಳನ್ನು ತಡೆಗಟ್ಟಲು ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆಯ ಹಾಗೂ ಸಂಪ್ರದಾಯದ ಹೆಸರಿನಲ್ಲಿ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧಕ (ಇವ ನಮ್ಮವ ಇವ ನಮ್ಮವ) ೨೦೨೬ನ್ನು ವಿಧಾನಸಭೆಯಲ್ಲಿ ಬುಧವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಕಾನೂನು ಸಚಿವರ ಪರವಾಗಿ ಮಂಡಿಸಿದರು.

ಈ ಕಾಯ್ದೆಯಲ್ಲಿ ಮರ್ಯಾದೆ ಹೆಸರಿನಲ್ಲಿ ಹತ್ಯೆಯಾದರೆ ಭಾರತೀಯ ನ್ಯಾಯ ಸಂಹಿತೆ ಅಡಿ ವಿಧಿಸಲಾದ ದಂಡನೆಗೆ ಬಾಧಕವಾಗದಂತೆ ಮರ್ಯಾದೆ ಹೆಸರಿನಲ್ಲಿ ದಂಪತಿ ಅಥವಾ ಅವರಲ್ಲಿ ಯಾರೊಬ್ಬರನ್ನೂ ಅಥವಾ ಯಾರೇ ವ್ಯಕ್ತಿಯನ್ನು ಯಾವುದೇ ರೀತಿಯ ಮೂಲಕ ಅವರ ಸಾವಿಗೆ ಕಾರಣರಾದ ಅಥವಾ ಸಾವಿಗೆ ಕಾರಣವಾಗುವ ಯಾವುದೇ ಅಂತಹ ಕೃತ್ಯವನ್ನು ಎಸಗಿದ ಯಾರೇ ವ್ಯಕ್ತಿಯು ಕನಿಷ್ಠ ಐದು ವರ್ಷಗಳ ಅವಧಿಯ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಮರ್ಯಾದೆ ಹೆಸರಿನಲ್ಲಿ ದಂಪತಿ ಅಥವಾ ಅವರಲ್ಲಿ ಯಾರೊಬ್ಬರಿಗೂ ತೀವ್ರ ಗಾಯಗೊಳ್ಳಲು ಕಾರಣರಾದ ಯಾರೇ ವ್ಯಕ್ತಿಗೆ ಮೂರು ವರ್ಷಗಳಿಗೆ ಕಡಿಮೆ ಇಲ್ಲದ ಅವಧಿಯ ಜೈಲು ಶಿಕ್ಷೆ ಮತ್ತು ೩ ಲಕ್ಷ ರೂ.ಗಳವರೆಗೆ ಜುಲ್ಮಾನೆಯನ್ನು ವಿಧಿಸಲು ಈ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಮರ್ಯಾದೆ ಹೆಸರಿನಲ್ಲಿ ದಂಪತಿ ಅಥವಾ ಅವರಲ್ಲಿ ಯಾರೊಬ್ಬರಿಗೂ ಸಣ್ಣ ಗಾಯವಾಗಲು ಕಾರಣರಾದ ಯಾರೇ ವ್ಯಕ್ತಿಗೆ ೨ ವರ್ಷಗಳಿಗೆ ಕಡಿಮೆ ಇಲ್ಲದೆ ಜೈಲು ಶಿಕ್ಷೆ ಮತ್ತು ೨ ಲಕ್ಷ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

3 hours ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

3 hours ago

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

3 hours ago

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

4 hours ago

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…

4 hours ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

4 hours ago