ರಾಜ್ಯ

ಗೃಹಲಕ್ಷ್ಮೀ ಯೋಜನೆಗೆ ಪ್ರಚಾರ ಅವಶ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ: ಸರ್ಕಾರ ಕೊಟ್ಟ ಮಾತಿನಂತೆ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ನಮ್ಮ ನಿರೀಕ್ಷೆಗೂ ಮೀರಿ ಯೋಜನೆ ಯಶಸ್ವಿಯಾಗಿರುವುದು ನಮಗೆಲ್ಲ ಹೆಮ್ಮೆ ತರುವ ಸಂಗತಿಯಾಗಿದೆ. ಆದರೆ, ಗೃಹಲಕ್ಷ್ಮೀ ಯೋಜನೆಗೆ ಪ್ರಚಾರದ ಅವಶ್ಯಕತೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರಿನ ಜವಾಹರ ಬಾಲಭವನ ಸೊಸೈಟಿ, ನಿರ್ಮಿತಿ ಕೇಂದ್ರ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಸಂಯುಕ್ತ ಆಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಜಿಲ್ಲಾ ಬಾಲ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಬಳಿಕ ಅವರು  ಮಾತನಾಡಿದರು.

ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಲ್ಲೂ ನಮ್ಮ ಯೋಜನೆಗಳನ್ನು ಕಾಪಿ ಮಾಡಲಾಗುತ್ತಿದೆ.‌ ಇದು ಗೃಹಲಕ್ಷ್ಮೀ ಯೋಜನೆಯ ಜನಪ್ರಿಯತೆಗೆ ಸಾಕ್ಷಿ. ನಾಳೆ ಗೃಹಲಕ್ಷ್ಮೀ ಯೋಜನೆಯನ್ನು ಜನೋಪಯೋಗಿಯಾಗಿ ಮತ್ತು ಸ್ವಾವಲಂಬನೆಗಾಗಿ ಬಳಸಿದ ಮಹಿಳೆಯರನ್ನು ವಿಧಾನಸೌಧಕ್ಕೆ ಕರೆದುಕೊಂಡು ಹೋಗುತ್ತಿದ್ದೇನೆ. ಅವರಿಗೆಲ್ಲ ಆಡಳಿತ ಸೌಧವನ್ನು, ಆಡಳಿತ ವ್ಯವಸ್ಥೆಯನ್ನು ಹತ್ತಿರದಿಂದ ತೋರಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಸಚಿವರು ಹೇಳಿದರು. ‌

 

ಬೆಳಗಾವಿಯಲ್ಲಿ ಸುಸಜ್ಜಿತ ಬಾಲಭವನ ನನ್ನ ಸಂಕಲ್ಪ

ಬೆಂಗಳೂರಿನ ಬಾಲಭವನಕ್ಕಿಂತ ಸುಂದರವಾಗಿ, ವಿಶಿಷ್ಟವಾಗಿ ಬೆಳಗಾವಿ ಬಾಲಭವನ ನಿರ್ಮಿಸಬೇಕೆನ್ನುವುದು ನನ್ನ ಸಂಕಲ್ಪ. 20 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಬಾಲಭವನ ಬೆಳಗಾವಿಯಲ್ಲಿ ನಿರ್ಮಾಣಗೊಳ್ಳಲಿದೆ. ಬೆಳಗಾವಿ ಎರಡನೇ ರಾಜಧಾನಿ ಮಟ್ಟಕ್ಕೆ ಬೆಳೆಯುತ್ತಿದೆ. ಅದಕ್ಕೆ ತಕ್ಕಂತೆ ಇಲ್ಲಿ ಅಭಿವೃದ್ಧಿ ಕೆಲಸಗಳು ಕೂಡ ನಡೆಯಬೇಕು, ಮೂಲಭೂತ ಸೌಲಭ್ಯಗಳು ಕೂಡ ನಿರ್ಮಾಣವಾಗಬೇಕು ಎಂದರು.

ನಮ್ಮ ಇಲಾಖೆಯಿಂದ ಜಿಲ್ಲೆಗೆ ಅನೇಕ ಯೊಜನೆಗಳನ್ನು ತರಲಾಗುತ್ತಿದೆ. ಇಷ್ಟೊಂದು ದೊಡ್ಡ ಜಿಲ್ಲೆಗೆ ಈವರೆಗೂ ಒಂದು ಸುಸಜ್ಜಿತ ಭಾಲಭವನ ಇಲ್ಲ, ನಮ್ಮ ಇಲಾಖೆಗೆ ಸುಸಜ್ಜಿತ ಕಟ್ಟಡ ಕೂಡ ಇಲ್ಲ. ಈ ಹಿನ್ನೆಲೆಯಲ್ಲಿ ಬಾಲಭವನಕ್ಕೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ನಗರದ ಮಧ್ಯದಲ್ಲಿಯೇ 4 ಎಕರೆ ಈ ವಿಶಾಲ ಜಾಗವನ್ನು ಗುರುತಿಸಿ ಬಾಲಭವನ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಈ ಜಾಗದ ಮಾರುಕಟ್ಟೆ ಮೌಲ್ಯ100 ಕೋಟಿಗೂ ಅಧಿಕ. ಇದರ ಜೊತೆಗೆ, ನಮ್ಮ ಇಲಾಖೆಯ ಕಟ್ಟಡ ನಿರ್ಮಾಣಕ್ಕೆ ಸಹ ನಿರ್ಧರಿಸಲಾಗಿದೆ, ಇದಕ್ಕೆ 6 ಕೋಟಿ ರೂ. ಮಂಜೂರಾಗಿದ್ದು, ಇಷ್ಟರಲ್ಲೇ ಹಣ ಬಿಡುಗಡೆಯಾಗಲಿದೆ. ಬಾಲಭವನಕ್ಕೆ ಈಗಾಗಲೆ 20 ಕೋಟಿ ರೂ. ಮಂಜೂರು ಮಾಡಲಾಗಿದೆ, ಈಗಾಗಲೇ 2 ಕೋಟಿ ರೂ. ಬಿಡುಗಡೆ ಕೂಡ ಆಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಮಕ್ಕಳಿಗಾಗಿ ರೈಲು, ಫ್ಯಾಂಟಸಿ ಪಾರ್ಕ್ ಸೇರಿದಂತೆ, ಆಟದೊಂದಿಗೆ ಕಲಿಯುವುದಕ್ಕೆ ಅವಕಾಶವಾಗುವಂತೆ ಸರ್ವವಿಧದ ಸೌಕರ್ಯಗಳನ್ನು ಬಾಲಭವನ ಒಳಗೊಳ್ಳಲಿದೆ. ಮಕ್ಕಳಿಗೆ ಕಲಿಯುವುದಕ್ಕೆ ಮತ್ತು ನಲಿಯುವುದಕ್ಕೆ ಇದೊಂದು ಅತ್ಯುತ್ತಮ ಸ್ಥಳವಾಗಬೇಕೆನ್ನುವುದೇ ನನ್ನ ಉದ್ದೇಶ ಎಂದರು.

ಕಾನೂನಿಗಿಂತ ದೊಡ್ಡವರು ಯಾರು ಇಲ್ಲ
ಪಂಚಮಸಾಲಿ ಮೀಸಲಾತಿ ಹೋರಾಟದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ಮಾಡೋಣ. ಪ್ರಚೋದನಾತ್ಮಕ ಹೋರಾಟ ಮಾಡುವುದು ಬೇಡ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಸಚಿವರು ಹೇಳಿದರು.

ಈ ವೇಳೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ್, ಬಾಲಭವನ ಸೊಸೈಟಿ ಅಧ್ಯಕ್ಷರಾದ ಜಿ.ಆರ್.ನಾಯ್ಡು, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ, ಕಾರ್ಪೊರೇಟರ್ ಸಂದೀಪ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

42 mins ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

45 mins ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

46 mins ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

48 mins ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

51 mins ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

53 mins ago