ರಾಜ್ಯ

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಮಂಡಳಿ (FKCCI) ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕೈಗಾರಿಕೋದ್ಯಮಿಗಳ ಜೊತೆ ಮಹತ್ವದ ಸಭೆ ನಡೆಸಿದರು.

ನಗರದ ಹೆಚ್‌ಎಂಟಿ ಭವನದಲ್ಲಿರುವ ಸಚಿವರ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ವಿಸ್ತರಣೆಗೆ ಇರುವ ವಿಪುಲ ಅವಕಾಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು.

ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ₹500 ಕೋಟಿ ವೆಚ್ಚದಲ್ಲಿ ಜಾಗತಿಕ ಮಟ್ಟದ ARAI (ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್‌ ಆಫ್ ಇಂಡಿಯಾ) ಪರೀಕ್ಷಾ ಕೇಂದ್ರವನ್ನು ಸ್ಥಾಪಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ, ಅದರಲ್ಲಿಯೂ ಮುಖ್ಯಮಂತ್ರಿಗಳಿಗೆ ಸ್ವತಃ ನಾನೇ ಪತ್ರ ಬರೆದಿದ್ದೇನೆ. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಈ ತರಬೇತಿ ಕೇಂದ್ರಕ್ಕೆ ಕಳೆದ ಬಜೆಟ್ ನಲ್ಲಿ ₹500 ಕೋಟಿ ಮೀಸಲಿಡಲಾಗಿದೆ. ಅಗತ್ಯಬಿದ್ದರೆ ಇನ್ನೂ ₹500 ಕೋಟಿ ಹೂಡಿಕೆ ಮಾಡಲು ಕೇಂದ್ರ ತಯಾರಿದೆ ಎಂಬ ಅಂಶವನ್ನು ಕೇಂದ್ರ ಸಚಿವರು ಸಭೆಯ ಗಮನಕ್ಕೆ ತಂದರು.

ಈ ಬಗ್ಗೆ ಸಚಿವರನ್ನು ಅಭಿನಂದಿಸಿದ ಕೈಗಾರಿಕೋದ್ಯಮಿಗಳು, ಇಂತಹ ಕೇಂದ್ರವೊಂದು ರಾಜ್ಯಕ್ಕೆ ಅಗತ್ಯವಿದ್ದು, ವಾಹನೋದ್ಯಮಕ್ಕೆ ದೊಡ್ಡ ಶಕ್ತಿ ನೀಡಲಿದೆ. ಮುಖ್ಯವಾಗಿ ಇವಿ ಉದ್ಯಮಕ್ಕೆ ದೊಡ್ಡ ಪ್ರಮಾಣದಲ್ಲಿ ಬೂಸ್ಟ್ ನೀಡಲಿದೆ ಎಂದರು.

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಸಂಶೋಧನೆ, ಉತ್ಪಾದನೆ ಹಾಗೂ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುವುದು. ಸಾರಿಗೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸಿ ಪರಿಸರ ಪೂರಕ ಸಾರಿಗೆ ವ್ಯವಸ್ಥೆ ರೂಪಿಸುವ ದೃಢ ಸಂಕಲ್ಪವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹೊಂದಿದ್ದಾರೆ. ಅವರ ಕನಸು ನನಸು ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಎಚ್‌ಡಿಕೆ ಹೇಳಿದರು.

ಕಂಪನಿಗಳು ಕರ್ನಾಟಕದಲ್ಲಿ ಹುಟ್ಟಿಕೊಳ್ಳುತ್ತಿವೆ, ಆದರೆ ಬೇರೆ ರಾಜ್ಯಗಳಲ್ಲಿ ಉತ್ಪಾದನೆ ಮಾಡುತ್ತಿವೆ. ಇಂಥ ಪರಿಸ್ಥಿತಿಯಿಂದ ಕರ್ನಾಟಕವನ್ನು ಹೊರತರಬೇಕಿದೆ. ಅದಕ್ಕೆ ARAI ಕೇಂದ್ರ ದೊಡ್ಡ ಮಟ್ಟದ ಕೊಡುಗೆ ನೀಡುತ್ತದೆ. ಆಟೋಮೊಬೈಲ್ ಪರೀಕ್ಷಾ ಕೇಂದ್ರ ಬರುವುದರ ಜತೆಗೆ ಆ ಮೂಲಕ ಸಂಶೋಧನೆ, ಉತ್ಪಾದನೆಗೂ ಮುಂದಿನ ದಿನಗಳಲ್ಲಿ ಅವಕಾಶಗಳು ತೆರೆದುಕೊಳ್ಳಲಿವೆ ಎಂದು ಎಂದು ಕೇಂದ್ರ ಸಚಿವರು ಒತ್ತಿ ಹೇಳಿದರು.

ಸ್ಥಳೀಯ ಮಟ್ಟದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿ ಆಗಬೇಕು ಎಂಬುದು ಪ್ರಧಾನಿಗಳ ದೂರದೃಷ್ಟಿ. ಆ ನಿಟ್ಟಿನಲ್ಲಿ ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ಬೃಹತ್ ಪ್ರಮಾಣದಲ್ಲಿ ಉತ್ತೇಜನ ನೀಡುತ್ತಿದ್ದೇವೆ. ರಾಜ್ಯದಲಿ ARAI ಪರೀಕ್ಷಾ ಕೇಂದ್ರ ಸ್ಥಾಪನೆ ಆದರೆ ಸಾವಿರಾರು ಸಂಖ್ಯೆಯಷ್ಟು ಉದ್ಯೋಗ ಸೃಷ್ಟಿ ಆಗುವುದಷ್ಟೇ ಅಲ್ಲದೆ, ಪರೋಕ್ಷ ಉದ್ಯೋಗಗಳನ್ನು ಬೃಹತ್ ಪ್ರಮಾಣದಲ್ಲಿ ಸೃಷ್ಟಿಸಿ ದೊಡ್ಡ ಮಟ್ಟದ ಆಟೋ ಇಕೋ ಸಿಸ್ಟಮ್ ನಿರ್ಮಾಣಕ್ಕೆ ನಾಂದಿ ಹಾಡುತ್ತದೆ. ಹೀಗಾಗಿ ಈ ಯೋಜನೆಗೆ ರಾಜ್ಯ ಸರ್ಕಾರದ ಸಹಕಾರವನ್ನು ಕೋರಿದ್ದೇವೆ ಎಂದು ಅವರು ಹೇಳಿದರು.

ಅದೇ ರೀತಿ ಕರ್ನಾಟಕದಲ್ಲಿ ಇವಿ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿಗೂ ಕೇಂದ್ರ ಸರ್ಕಾರ ಉತ್ತೇಜನ ನೀಡುತ್ತಿದೆ. ಅತ್ಯಾಧುನಿಕ, ಸಮಗ್ರವಾದ ಇವಿ ಪೂರಕ ವ್ಯವಸ್ಥೆ ಮಾಡುವುದರಿಂದ ರಾಜ್ಯಕ್ಕೆ ಆರ್ಥಿಕ, ಉದ್ಯೋಗ ಹಾಗೂ ಉತ್ಪಾದನೆ ಕ್ಷೇತ್ರಗಳಲ್ಲಿ ಭಾರೀ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಸಚಿವರು ಪ್ರತಿಪಾದಿಸಿದರು.

ಸಭೆಯಲ್ಲಿ ಎಫ್‌ಕೆಸಿಸಿಐ ಅಧ್ಯಕ್ಷೆ ಉಮಾರೆಡ್ಡಿ, ಹಿರಿಯ ಉಪಾಧ್ಯಕ್ಷ ಟಿ.ಸಾಯಿರಾಂ ಪ್ರಸಾದ್, ಉಪಾಧ್ಯಕ್ಷ ಬಿ.ಪಿ. ಶಶಿಧರ್, ಗ್ರೀನ್ ಎನರ್ಜಿ ಸಮಿತಿ ಅಧ್ಯಕ್ಷ ರಮೇಶ್ ಶಿವಣ್ಣ, ಮಾಜಿ ಅಧ್ಯಕ್ಷರಾದ ಎಸ್. ಸಂಪತ್ ರಾಮನ್, ಆರ್. ಶಿವಕುಮಾರ್, ಕೆ. ಶಿವಷಣ್ಮುಗಂ, ಎಲ್.ಲಕ್ಷ್ಮಣ ಸೇರಿದಂತೆ ಕೈಗಾರಿಕೋದ್ಯಮಿಗಳು ಭಾಗಿಯಾಗಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago