ರಾಜ್ಯ

ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡಲು ಒಪ್ಪಿದ ಸಚಿವ ಮಧು ಬಂಗಾರಪ್ಪ

ಬೆಳಗಾವಿ: 2025ರ ಫೆಬ್ರವರಿ ತಿಂಗಳ ಕೊನೆಯವರೆಗೆ ಪ್ರೌಢಶಾಲಾ ಸಹ ಶಿಕ್ಷಕರ ಬಡ್ತಿ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

ವಿಧಾನ ಪರಿಷತ್‌ನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ವಿ ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದರು. ಪ್ರೌಢ ಶಾಲಾ ಸಹ ಶಿಕ್ಷಕರು ಬಹು ದಿನಗಳಿಂದ ಬಡ್ತಿಯ ಬಗ್ಗೆ ಆಗ್ರಹಿಸುತ್ತಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸಿದ ಸಚಿವರು, ಮೊದಲು ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಠತಾ ಪಟ್ಟಿ ಸಿದ್ಧಪಡಿಸಿ, ನಂತರ ತಾತ್ಕಾಲಿಕ ಪಟ್ಟಿ ಪ್ರಕಟಿಸುತ್ತೇವೆ. ಆಕ್ಷೇಪಣೆಗಳ ಸಲ್ಲಿಕೆಯ ನಂತರ ಅವುಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು. ಇದಾದ ಮೇಲೆ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು.

ಈಗಾಗಲೇ 2013ರ ಸಾಲಿನವರಿಗೆ ಪದೋನ್ನತಿ ಪ್ರಕ್ರಿಯೆ ನಡೆಸಲಾಗಿದೆ. 2024ರ ಮಾರ್ಚ್‌ನಲ್ಲಿ ಜೇಷ್ಠತಾ ಪಟ್ಟಿ ತಯಾರಿಕೆ ಸಂಬಂಧ ಮಾರ್ಗದರ್ಶನ ಕೋರಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ವಿವರಿಸಿದರು.

ಈ ಪ್ರಸ್ತಾವನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ನೀಡಿರುವ ಅಭಿಪ್ರಾಯದಂತೆ ನಾಲ್ಕು ಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಶಿಕ್ಷಕರ ಜೇಷ್ಠತಾ ಪಟ್ಟಿ ಪರಿಶೀಲಿಸಿ ನಂತರ ಅಂತಿಮ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಲು ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…

2 hours ago

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌…

2 hours ago

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

3 hours ago

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

4 hours ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

4 hours ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

4 hours ago