Mysore
22
clear sky

Social Media

ಶನಿವಾರ, 18 ಏಪ್ರಿಲ 2026
Light
Dark

ವಿಧಾನಸೌಧ ಮುಂಬಾಗ ಪಾಕ್‌ಪರ ಘೋಷಣೆ ಪ್ರಕರಣ: ಮೂವರಿಗೆ ಜಾಮೀನು!

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಯ್ಯದ್‌ ನಾಸೀರ್‌ ಹುಸೇನ್‌ ಜಯಗಳಿಸಿದ ಬೆನ್ನಲ್ಲೇ ಸಂಭ್ರಮಿಸುವ ಭರದಲ್ಲಿ ಹುಸೇನ್‌ ಅಭಿಮಾನಿಗಳು ಪಾಕಿಸ್ತಾನ್‌ ಜಿಂದಾಬಾಜ್‌ ಎಂದು ಘೋಷಣೆ ಕೂಗಿದ್ದರು ಎಂದ ಆರೋಪಿಸಿ ಮೂವರನ್ನು ವಶಕ್ಕೆ ಪಡೆಯಲಾಗಿತ್ತು.

ಸದ್ಯ ಈ ಮೂವರಿಗೆ ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು (ಎಸಿಎಂಎಂ) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳಾದ ದೆಹಲಿಯ ಕಿಶನ್‌ ಗಂಜ್‌ನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ, ಬೆಂಗಳೂರಿನ ಜಯಮಹಲ್‌ ನಿವಾಸಿ ಡಿ.ಎಸ್‌ ಮುನಾವರ್ ಅಹ್ಮದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 39ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ವಿ.ವಿಜೇತ್‌ ಪುರಸ್ಕರಿಸಿ ಷರತ್ತುಬದ್ಧ ಜಾಮೀನು ನೀಡಿದ್ದಾರೆ.

ಆರೋಪಿಗಳು ರೂ.1 ಲಕ್ಷ ಮೊತ್ತದ ಮುಚ್ಚಳಿಕೆ ನೀಡಬೇಕು, ಇಬ್ಬರು ವ್ಯಕ್ತಿಗಳು ಜಾಮೀನು ಒದಗಿಸಬೇಕು, ಆರೋಪಿಗಳು ದೇಶ ಬಿಟ್ಟು ಹೋಗಬಾರದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಹಾಗೂ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂಬ ಷರತ್ತುಗಳನ್ನು ಕೋರ್ಟ್‌ ವಿಧಿಸಿದೆ.

Tags:
error: Content is protected !!