ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಜಯಗಳಿಸಿದ ಬೆನ್ನಲ್ಲೇ ಸಂಭ್ರಮಿಸುವ ಭರದಲ್ಲಿ ಹುಸೇನ್ ಅಭಿಮಾನಿಗಳು ಪಾಕಿಸ್ತಾನ್ ಜಿಂದಾಬಾಜ್ ಎಂದು ಘೋಷಣೆ ಕೂಗಿದ್ದರು ಎಂದ ಆರೋಪಿಸಿ ಮೂವರನ್ನು ವಶಕ್ಕೆ ಪಡೆಯಲಾಗಿತ್ತು.
ಸದ್ಯ ಈ ಮೂವರಿಗೆ ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು (ಎಸಿಎಂಎಂ) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳಾದ ದೆಹಲಿಯ ಕಿಶನ್ ಗಂಜ್‌ನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ, ಬೆಂಗಳೂರಿನ ಜಯಮಹಲ್ ನಿವಾಸಿ ಡಿ.ಎಸ್ ಮುನಾವರ್ ಅಹ್ಮದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 39ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ವಿ.ವಿಜೇತ್ ಪುರಸ್ಕರಿಸಿ ಷರತ್ತುಬದ್ಧ ಜಾಮೀನು ನೀಡಿದ್ದಾರೆ.
ಆರೋಪಿಗಳು ರೂ.1 ಲಕ್ಷ ಮೊತ್ತದ ಮುಚ್ಚಳಿಕೆ ನೀಡಬೇಕು, ಇಬ್ಬರು ವ್ಯಕ್ತಿಗಳು ಜಾಮೀನು ಒದಗಿಸಬೇಕು, ಆರೋಪಿಗಳು ದೇಶ ಬಿಟ್ಟು ಹೋಗಬಾರದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಹಾಗೂ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂಬ ಷರತ್ತುಗಳನ್ನು ಕೋರ್ಟ್ ವಿಧಿಸಿದೆ.
ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…
ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು…
ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…