ರಾಜ್ಯ

ಆಸ್ತಿ ನೋಂದಣಿ ಶುಲ್ಕ ಪರಿಷ್ಕರಣೆ : ನಾಳೆಯಿಂದ ಜಾರಿ

ಬೆಂಗಳೂರು : ರಾಜ್ಯ ಸರ್ಕಾರವು ಆಗಸ್ಟ್ 31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ. ಇದು ಆಗಸ್ಟ್‌ 31 ರಿಂದ ಜಾರಿಗೆ ಬರಲಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುದ್ರಾಂಕ, ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇ.6.6 ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ. 7.5,ತೆಲಂಗಾಣ ರಾಜ್ಯಗಳು ಶೇ.7.5 ರಷ್ಟು ಶುಲ್ಕ ಆಕರಿಸುತ್ತಿವೆ. ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಗೊಳ್ಳಲು (Rationalisation) ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು.

ಪರಿಷ್ಕೃತ ನೋಂದಣಿ ಶುಲ್ಕವನ್ನು ಸುಗಮವಾಗಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಲು ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಅಪಾಯಿಂಟ್‌ಮೆಂಟ್ ಪಡೆದಿರುವವರು ಅಥವಾ ಶುಲ್ಕವನ್ನು ಪಾವತಿಸಿ ಅಪಾಯಿಂಟ್‌ಮೆಂಟ್ ಪಡೆಯದಿರುವವರು, ವ್ಯತ್ಯಾಸದ ಮೊತ್ತವನ್ನು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು. ಮೊದಲು ಬಳಸಿದ ಲಾಗಿನ್ ಮೂಲಕವೇ ಈ ಪಾವತಿಯನ್ನು ಮಾಡಬೇಕು. ಅರ್ಜಿದಾರರಿಗೆ ನೆರವಾಗುವ ದೃಷ್ಟಿಯಿಂದ ಅಗತ್ಯ ಸೂಚನೆಗಳನ್ನು ಒಳಗೊಂಡ ಎಸ್‌ಎಂಎಸ್‌ ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು.

ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಸಲ್ಲಿಸಲಾಗಿರುವ ಹಾಗೂ ಪರಿಶೀಲನೆಯಲ್ಲಿರುವ ದಸ್ತಾವೇಜುಗಳಿಗೆ ನೋಂದಣಿ ಶುಲ್ಕವನ್ನು ಮರು ಲೆಕ್ಕ ಹಾಕಲಾಗುವುದು ಮತ್ತು ಪರಿಷ್ಕೃತ ಶೇಕಡ 2 ರಂತೆ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ವರ್ಗದ ಅರ್ಜಿದಾರರಿಗೆ ಪಾವತಿಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಷ್ಕೃತ ನೋಂದಣಿ ಶುಲ್ಕದ ವಿವರವನ್ನು ತಿಳಿಸಲಾಗುವುದು.

ಇಲಾಖೆಯು ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಎಲ್ಲಾ ಅರ್ಜಿದಾರರಿಗೆ ಮೇಲ್ಕಾಣಿಸಿದ ನವೀಕರಿಸಿದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಂತ ಹಂತವಾಗಿ ಅನುಸರಿಸಬಹುದಾದ ವಿವರವಾದ ಸೂಚನೆಗಳನ್ನು ಇಲಾಖೆಯ ಅಧಿಕೃತ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಶೆಡ್‌, 4ಸಾವಿರ ಕೋಳಿ ಬೆಂಕಿಗಾಹುತಿ ; 25 ಲಕ್ಷ ನಷ್ಟ

ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…

7 hours ago

ಸಿಎನ್‌ಜಿ ಸಮಸ್ಯೆ ಇಲ್ಲ : ಸಚಿವ ಮುನಿಯಪ್ಪ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…

8 hours ago

ಬಲಮುರಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…

8 hours ago

ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ

ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…

8 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…

8 hours ago

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…

8 hours ago