ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್.2ಕ್ಕೆ ಮುಂದೂಡಿಕೆ ಮಾಡಿದೆ.
ಹೈಕೋರ್ಟ್ ನ್ಯಾಯಮೂರ್ತಿಗಳಾದ ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಸ್ನೇಹಮಯಿ ಕೃಷ್ಣ ಪರ ವಕೀಲ ಕೆ.ಜಿ.ರಾಘವನ್ ಅವರು ವಾದ ಮಂಡನೆಗೆ ಅವಕಾಶ ಕೋರಿದರು.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯರ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ.
ಇಂದು ಸಿಎಂ ಸಿದ್ದರಾಮಯ್ಯ ಪರ ವಕೀಲ ರವಿವರ್ಮಕುಮಾರ್, ರಾಜ್ಯಪಾಲರ ಪರ ಸಾಲಿಸಿಟರ್, ಜನರಲ್ ತುಷಾರ್ ಮೆಹ್ತಾ, ಪ್ರದೀಪ್ ಕುಮಾರ್ ಪರ ಪ್ರಭುಲಿಂಗ ನಾವದಗಿ ಹಾಗೂ ಟಿಜೆ ಅಬ್ರಾಹಂ ಪರ ರಂಗನಾಥ ರೆಡ್ಡಿ ಸುದೀರ್ಘ ವಾದ ಮಂಡಿಸಿದರು.
ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಿದೆ.




