ರಾಜ್ಯ

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್:‌ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಸೂಚನೆ

ಮೈಸೂರು: ಮುಡಾ ಹಗರಣ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆ ರಾಜ್ಯಾದ್ಯಂತ ಸಿದ್ದರಾಮಯ್ಯ ಬೆಂಬಲಿಗರು, ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ.

ಈ ಹಿನ್ನೆಲೆ ಯಾವುದೇ ಕ್ಷಣದಲ್ಲಾದರೂ ಬೆಂಬಲಿಗರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುತ್ತದೆ. ನಿನ್ನೆಯು ಸಹ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ. ನಾಳೆಯು ಸಹ ರಾಜ್ಯಾಂದ್ಯಂತ ಪ್ರತಿಭಟನೆಗೆ ಸಜ್ಜಾಗುತ್ತಿರುವುದುದಾಗಿ ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ ಎಂಬ ವಿಚಾರ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

ಪ್ರತಿಭಟನೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ಸಾಧ್ಯತೆ ಇರುವುದರಿಂದ ರಾಜ್ಯಾಂದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರು ಹಾಗೂ ಸಿಎಂ ತವರೂರು ಮೈಸೂರು ಸೇರಿದಂತೆ ಎಲ್ಲಾ ಜಿಲ್ಲೆಯಗಳಲ್ಲಿಯೂ ಪೊಲೀಸರು ಹೆಚ್ಚಿನ ಭದ್ರತೆ ವಹಿಸುವಂತೆ ಎಚ್ಚರಿಸಲಾಗಿದೆ. ಪ್ರತಿಭಟನೆಯ ಮಾಹಿತಿ ಪಡೆದು, ಯಾವುದೇ ರೀತಿಯಲ್ಲಿಯೂ ಶಾಂತಿಭಂಗವಾಗದಂತೆ ಎಚ್ಚರ ವಹಿಸುವಂತೆ ಎಲ್ಲಾ ಜಿಲ್ಲೆಗಳ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕುವೈತ್‌ ಭೇಟಿ: ಅರೇಬಿಯನ್‌ ಗಲ್ಫ್‌ ಕಪ್‌ ಉದ್ಘಾಟನೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ

ಕುವೈತ್‌/ನವದೆಹಲಿ: 26ನೇ ಅರೇಬಿಯನ್‌ ಗಲ್ಫ್‌ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್‌ ದೊರೆ ಶೇಖ್‌ ಮಿಶಾಲ್‌…

5 mins ago

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಿಎಂ ಸಿದ್ದರಾಮಯ್ಯ

371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ…

5 mins ago

ಬಿಜೆಪಿಗೆ ಆತಂಕ ತಂದ ಶಾ ಅಂತರಾಳದ ಮಾತು

‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…

17 mins ago

ವೈಜ್ಞಾನಿಕ ಕಸ ವಿಲೇವಾರಿಗೆ ಜಾಗದ ಸಮಸ್ಯೆ

ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…

28 mins ago

ಹೈಟೆಕ್‌ ಬಸ್‌ ನಿಲ್ದಾಣದಲ್ಲಿ ಹಲವು ಸಮಸ್ಯೆಗಳು

ಭೇರ್ಯ: ಸಂಜೆ ನಂತರ ನಿಲ್ದಾಣದೊಳಗೆ ಬಾರದ ಬಸ್‌ಗಳು; ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಇಲ್ಲ ಭೇರ್ಯ ಮಹೇಶ್ ಭೇರ್ಯ: ಗ್ರಾಮದ…

53 mins ago

ಮರ ಕಡಿಯದೆಯೇ ಕಾಗದ ತಯಾರಿಸುವ ಪೇಪರ್‌ ಪವಾರ್‌

ಕೀರ್ತಿ ಇದನ್ನು ನೀವು ಊಹಿಸಲೂ ಸಾಧ್ಯವಿಲ್ಲ. ಚಹ ಮಾಡಿದ ನಂತರ ಉಳಿದ ಜೊಗಟು, ಈರುಳ್ಳಿ ಸಿಪ್ಪೆ, ಚಿಂದಿ ಬಟ್ಟೆ, ಹರಿದ…

1 hour ago