ರಾಜ್ಯ

ಪ್ರಾಸಿಕ್ಯೂಷನ್‌ ಫೈಟ್: ಕೆಲ ಬಿಜೆಪಿ ಶಾಸಕರು ನಮ್ಮ ಪರ; ಸಂತೋಷ್‌ ಲಾಡ್‌

ಹುಬ್ಬಳ್ಳಿ: ಅಹಿಂದ ವರ್ಗಗಳ ನಾಯಕರ ಬೆಳವಣಿಗೆ ಸಹಿಸಲಾಗದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್‌ ರಾಜಕೀಯ ಪಿತೂರಿ ನಡೆಸಿದೆ. ಇದನ್ನು ಕಾಂಗ್ರೆಸ್‌ ರಾಜಕೀಯವಾಗಿಯೇ ಎದುರಿಸಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೆಳಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು 40 ವರ್ಷದ ರಾಜಕೀಯ ಜೀವನದಲ್ಲಿ ಯಾವುದೇ ಕಳಂಕವಿಲ್ಲದೆ ರಾಜಕೀಯ ಮಾಡಿದ್ದಾರೆ. ಇದೆಲ್ಲಾ ವಿಪಕ್ಷಗಳಿಗೆ ಸಹಿಸಲಾಗುತ್ತಿಲ್ಲ. ಹೀಗಾಗಿ ರಾಜಭವನವನ್ನು ಬಳಸಿಕೊಂಡು ಸಿದ್ದರಾಮಯ್ಯ ವಿರುದ್ಧ ವಿಪಕ್ಷಗಳು ಹುನ್ನಾರ ನಡೆಸಿವೆ. ಆದರೆ, ರಾಜ್ಯದ ಜನತೆ, ಶಾಸಕರು ಅಹಿಂದ ನಾಯಕ ಸಿದ್ದರಾಮಯ್ಯ ಅವರೊಂದಿಗಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಸಿಎಂ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ, ಕಾಂಗ್ರೆಸ್‌ ನಾಯಕರು ರಾಜ್ಯಾದ್ಯಂತ ಹೋರಾಟ ನಡೆಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

5 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

6 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

9 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

9 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

10 hours ago