ರಾಜ್ಯ

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್:‌ ಇದು ಕೇಂದ್ರ ಸರ್ಕಾರದ ಕುಮ್ಮಕ್ಕು ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾರು ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ನಿರ್ಧಾರರವನ್ನು ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಖಂಡಿಸಿದೆ. ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ನೇತೃತ್ವದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾನು ಯಾವ ಕಾರಣಕ್ಕೆ ರಾಜೀನಾಮೆ ನೀಡಬೇಕು? ಯಾವ ಆಧಾರದ ಮೇಲೆ ನೀಡಬೇಕು? ನನ್ನ ಪಾತ್ರದ ಬಗ್ಗೆ ಎಲ್ಲೂ, ಯಾರೂ ಹೇಳುತ್ತಿಲ್ಲ. ಆದರೂ ನಾನೇಕೆ ರಾಜೀನಾಮೆ ನೀಡಲಿ ಹೇಳಿ ಎಂದು ಪ್ರಶ್ನಿಸಿದ ಅವರು ನನ್ನ ಪ್ರಕಾರ ರಾಜ್ಯಪಾಲರೇ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯಪಾಲರು ರಾಷ್ಟ್ರಪತಿ, ಸಂವಿಧಾನದ ಪ್ರತಿನಿಧಿಯಾಗಿ ಕೆಲಸ ಮಾಡಬೇಕೇ ಹೊರತು, ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು. ರಾಜ್ಯಪಾಲರ ಈ ಧೋರಣೆಯನ್ನು ಸಚಿವ ಸಂಪುಟ ತೀವ್ರವಾಗಿ ಖಂಡಿಸಿದೆ. ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಚುನಾಯಿತ ಸರ್ಕಾರವನ್ನು ಅಸ್ತಿರಗೊಳಿಸುತ್ತಿದೆ. ಇದು ಪ್ರಜಾಪ್ರಭುತ್ವದ ಮೂಲಭೂತ ತತ್ವಕ್ಕೆ ಧಕ್ಕೆ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ, ಪ್ರಜಾತಂತ್ರಕ್ಕೆ ಧಕ್ಕೆ ಎಂದು ಸಚಿವ ಸಂಪುಟ ನಿರ್ಣಯಿಸಿದೆ. ಈ ಕಾನೂನುಬಾಹಿರ ತೀರ್ಮಾನದ ವಿರುದ್ಧ ಕಾನೂನು ಹೋರಾಟ ನಡೆಸಲು ಸಚಿವ ಸಂಪುಟ ಸಭೆ ನಿರ್ಣಯಿಸಿದೆ ಎಂದು ಹೇಳಿದರು.

ಎಲ್ಲಾ ರಾಜ್ಯ ಸರ್ಕಾರಗಳ ಎಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ 3rd September 2021 ಕ್ಕೆ ಕೇಂದ್ರ ಸರ್ಕಾರವೇ ಕಳುಹಿಸಿರುವ ಸುತ್ತೋಲೆ ಪ್ರಕಾರವೇ ರಾಜ್ಯಪಾಲರು ಪ್ರೊಸೀಜರ್ ಅನುಸರಿಸಿಲ್ಲ. ಸುತ್ತೋಲೆಯಲ್ಲಿರುವ ನಿರ್ದೇಶನಗಳನ್ನೇ ರಾಜ್ಯಪಾಲರು ಪಾಲಿಸಿಲ್ಲ. ಆದ್ದರಿಂದ ರಾಜ್ಯಪಾಲರ ನಿರ್ಣಯ ಕಾನೂನುಬಾಹಿರ. ಚುನಾಯಿತ ಸರ್ಕಾರವನ್ನು ಕಿತ್ತಾಕುವ ಕೇಂದ್ರ ಸರ್ಕಾರದ ದುರುದ್ದೇಶದ ಪ್ರಯತ್ನಕ್ಕೆ ನಾವು ತಡೆಯೊಡ್ಡಬೇಕು ಎಂದು ನಿರ್ಣಯಿಸಿದ್ದೇವೆ ಎಂದರು.

ನಮ್ಮ ಯಶಸ್ವೀ ಗ್ಯಾರಂಟಿ ಯೋಜನೆಗಳನ್ನು ಮೋದಿ ಮತ್ತು ಅಮಿತ್ ಶಾ ಕೂಡ ವಿರೋಧಿಸಿದ್ದರು. ಈ ಪ್ರಾಸಿಕ್ಯೂಷನ್‌ ಎಲ್ಲ ಕೇಂದ್ರದ ಕುಮ್ಮಕ್ಕು ಎಂದು ವಾಗ್ದಾಳಿ ನಡೆಸಿದರು.

ಅಬ್ರಹಾಂ ಎನ್ನುವವರು 26-7-2024 ರ ಬೆಳಗ್ಗೆ 11:30 ಗೆ ದೂರು ನೀಡಿದರೆ ಅದೇ ದಿನ10 ಗಂಟೆಗೇ ರಾಜ್ಯಪಾಲರ ಶೋ ಕಾಸ್ ನೋಟಿಸ್ ರೆಡಿ ಮಾಡಿದ್ದರು. ಆದರೆ, ಶಶಿಕಲಾ ಜೊಲ್ಲೆ, ಎಚ್.ಡಿ.ಕುಮಾರಸ್ವಾಮಿ ಅವರ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿ ದಾಖಲೆಗಳ ಸಮೇತ ರಾಜ್ಯಪಾಲರಿಗೆ ದೂರು ನೀಡಿದರೂ ಅವರ ವಿರುದ್ಧದ ತನಿಖೆಗೆ ಅನುಮತಿ ನೀಡಿಲ್ಲ. ಎಚ್.ಡಿ.ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ತನಿಖೆ ನಡೆದು ಕುಮಾರಸ್ವಾಮಿ ತಪ್ಪಿತಸ್ಥ ಎಂದು ಉಲ್ಲೇಖವಾಗಿದ್ದರೂ, ತನಿಖೆಯ ದಾಖಲೆಗಳ ಸಮೇತ ರಾಜ್ಯಪಾಲರಿಗೆ ದೂರು ನೀಡಿದ್ದರೂ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿಲ್ಲ. ಹಾಗೆಯೇ ಮುರುಗೇಶ್ ನಿರಾಣಿ ಮತ್ತು ಜನಾರ್ಧನ ರೆಡ್ಡಿ ಅವರ ವಿರುದ್ಧ ತನಿಖೆ ನಡೆದು ತನಿಖೆಯಲ್ಲಿ ತಪ್ಪಿತಸ್ಥರು ಎಂದು ಸಾಬೀತಾಗಿ, ತನಿಖಾ ವರದಿ ಉಲ್ಲೇಖವಾಗಿದ್ದರೂ ಇದೇ ರಾಜ್ಯಪಾಲರು ಕ್ರಮಕ್ಕೆ ಅನುಮತಿ ನೀಡಿಲ್ಲ. ಆದರೆ ನನ್ನ ವಿಚಾರದಲ್ಲಿ ಮಾತ್ರ ತರಾತುರಿಯಲ್ಲಿ ಅನುಮತಿ ನೀಡಿದ್ದಾರೆ ಎಂದು ರಾಜ್ಯಪಾಲರ ವಿರುದ್ಧ ಆರೋಪ ಮಾಡಿದರು.

ಈ ಪ್ರಕರಣದಲ್ಲಿ ನನ್ನ ವಿರುದ್ಧ ತನಿಖೆ ನಡೆದಿಲ್ಲ. ತನಿಖೆಯಲ್ಲಿ ನನ್ನ ಪಾತ್ರದ ಉಲ್ಲೇಖವಿಲ್ಲ. ನನ್ನ ಪಾತ್ರದ ಬಗ್ಗೆ ಯಾರೂ ಯಾವುದೇ ದಾಖಲೆ ಕೊಟ್ಟಿಲ್ಲ. ನನ್ನ ಸರ್ಕಾರದ ಅವಧಿಯಲ್ಲಿ ನಡೆದ ವಿಚಾರ ಇದಲ್ಲ. ನನ್ನಿಂದ ಒಂದೂ ಪತ್ರ ಹೋಗಿಲ್ಲ. ನನ್ನ ಸಹಿ ಎಲ್ಲೂ ಇಲ್ಲ. ನನ್ನಿಂದ ಒಂದೂ ಮನವಿ ಪತ್ರವೂ ಹೋಗಿಲ್ಲ. ಎಲ್ಲವೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವುದು. ಹೀಗೆ ಯಾವುದೇ ದಾಖಲೆ, ಸಾಕ್ಷ್ಯ, ತನಿಖೆ ಇಲ್ಲದಿದ್ದರೂ ರಾಜ್ಯಪಾಲರು ಆಧಾರವಿಲ್ಲದೆ ಅನುಮತಿ ನೀಡಿ ಕೇಂದ್ರದ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ-ಜೆಡಿಎಸ್ ರಾಜ್ಯದ ಜನರ ಮುಂದೆ ಬೆತ್ತಲಾಗುತ್ತಿದ್ದಾರೆ. ನಾವು ಸತ್ಯ ಮುಂದಿಟ್ಟು ಜನರ ನಡುವೆ ಮತ್ತಷ್ಟು ಗಟ್ಟಿ ಆಗುತ್ತೇವೆ. ನಮ್ಮ‌ ಸಮಾವೇಶಕ್ಕೆ ಒಂದೂವರೆ ಲಕ್ಷ ಜನ‌ ಸೇರಿದ್ದರು. ಬಿಜೆಪಿಗೆ 30 ಸಾವಿರ ಕೂಡ ಸೇರಿಲ್ಲ. ಜನ ನಮ್ಮ ಪರವಾಗಿ ಇರುವುದಕ್ಕೆ ಇದೇ ಸಾಕ್ಷಿ ಎಂದರು.

ನ್ಯಾಯ-ಸತ್ಯದ ಪರವಾಗಿ ನಿಂತು ಪ್ರಜಾಪ್ರಭುತ್ವ ಉಳಿವಿನ ಹೋರಾಟಕ್ಕೆ ಗಟ್ಟಿಯಾಗಿ ನಿಂತಿರುವ ಕ್ಯಾಬಿನೆಟ್, ಸಂಸದರು, ರಾಜ್ಯಸಭಾ ಸದಸ್ಯರುಗಳು, ಶಾಸಕರುಗಳು, ಇಡಿ ಪಕ್ಷ, ಹೈ ಕಮಾಂಡ್ ಮತ್ತು ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ನನ್ನ ಧನ್ಯವಾದ ಎಂದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

26 mins ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

4 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

5 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

11 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

11 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

11 hours ago