ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿಚಾರದಲ್ಲಿ ತೋರಿದ ಆಸಕ್ತಿಯನ್ನು ಇತರ ವಿಪಕ್ಷಗಳ ವಿರುದ್ಧ ಬಾಕಿ ಇರುವ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಲಿ ಎನ್ನುವ ನಿರ್ಣಯವನ್ನು ಇಂದು ನಡೆದ ಸಚಿವ ಸಂಪುಟ ಸಭೆ ತೆಗೆದುಕೊಂಡಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೆ ರಾಜ್ಯ ಕಾಂಗ್ರೆಸ್ ಈ ನಿರ್ಧಾರ ಕೈಗೊಂಡಿದೆ. ಈ ಮೂಲಕ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ.
ರಾಜ್ಯಪಾಲರ ಮುಂದೆ ಬಾಕಿ ಇರುವ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಬಗ್ಗೆ ಕ್ರಮಕೈಗೊಳ್ಳಲು ನೆರವು ಮತ್ತು ಸಲಹೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಬಾಕಿ ಇರುವ ಅಂದರೆ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಜನಾರ್ಧನ ರೆಡ್ಡಿ ಮತ್ತು ಮುರುಗೇಶ್ ನಿರಾಣಿ ಸೇರಿದಂತೆ ಇತರರ ವಿರುದ್ಧ ವಿಚಾರಣೆಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ ನೀಡಲು ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ.
ಈ ಮೂಲಕ ರಾಜ್ಯ ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧದ ಪ್ರಕರಣ ಬಗ್ಗೆ ರಾಜ್ಯಪಾಲರಿಗೆ ಸಲಹೆ ನೀಡಲು ಮುಂದಾಗಿದೆ.