ರಾಜ್ಯ

ವಿಪಕ್ಷ ನಾಯಕರಿಗೂ ಪ್ರಾಸಿಕ್ಯೂಷನ್‌ ಆಗಲಿ: ಕ್ಯಾಬಿನೆಟ್‌ ನಿರ್ಣಯ

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿಚಾರದಲ್ಲಿ ತೋರಿದ ಆಸಕ್ತಿಯನ್ನು ಇತರ ವಿಪಕ್ಷಗಳ ವಿರುದ್ಧ ಬಾಕಿ ಇರುವ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಲಿ ಎನ್ನುವ ನಿರ್ಣಯವನ್ನು ಇಂದು ನಡೆದ ಸಚಿವ ಸಂಪುಟ ಸಭೆ ತೆಗೆದುಕೊಂಡಿದೆ.

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೆ ರಾಜ್ಯ ಕಾಂಗ್ರೆಸ್‌ ಈ ನಿರ್ಧಾರ ಕೈಗೊಂಡಿದೆ. ಈ ಮೂಲಕ ಬಿಜೆಪಿ ಮತ್ತು ಜೆಡಿಎಸ್‌ ನಾಯಕರಿಗೆ ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ.

ರಾಜ್ಯಪಾಲರ ಮುಂದೆ ಬಾಕಿ ಇರುವ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಬಗ್ಗೆ ಕ್ರಮಕೈಗೊಳ್ಳಲು ನೆರವು ಮತ್ತು ಸಲಹೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಬಾಕಿ ಇರುವ ಅಂದರೆ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಜನಾರ್ಧನ ರೆಡ್ಡಿ ಮತ್ತು ಮುರುಗೇಶ್ ನಿರಾಣಿ ಸೇರಿದಂತೆ ಇತರರ ವಿರುದ್ಧ ವಿಚಾರಣೆಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ ನೀಡಲು ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ.

ಈ ಮೂಲಕ ರಾಜ್ಯ ಕಾಂಗ್ರೆಸ್‌ ಬಿಜೆಪಿ, ಜೆಡಿಎಸ್‌ ನಾಯಕರ ವಿರುದ್ಧದ ಪ್ರಕರಣ ಬಗ್ಗೆ ರಾಜ್ಯಪಾಲರಿಗೆ ಸಲಹೆ ನೀಡಲು ಮುಂದಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago