ಬೆಂಗಳೂರು : ಸಾಂಸ್ಕೃತಿಕ ನಗರಿ ಮೈಸೂರಿನ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಜವಬ್ಧಾರಿ ನನ್ನ ಮೇಲಿದ್ದು ಅದಕ್ಕಾಗಿ ಹೆಚ್ಚಿನ ಆಧ್ಯತೆ ನೀಡುತ್ತೇನೆ ಎಂದು ಮೈಸೂರು – ಕೊಡಗು ನೋತನ ಸಂಸದರಾದ ಯದುವೀರ್ ತಿಳಿಸಿದ್ದಾರೆ.
ನೆನ್ನೆ ನೂತನ ಸಂಸದರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ನನಗೆ ಮತ ನೀಡಿದ ಎಲ್ಲಾ ಮತದಾರರಿಗೂ ಧನ್ಯವಾದಗಳು ಎಂದು ಹೇಳಿದರು.
ಸಾಂಸ್ಕೃತಿಕ ನಗರಿ ಮೈಸೂರಿನ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಜವಬ್ಧಾರಿ ನನ್ನ ಮೇಲಿದೆ. ಅದಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತೇವೆ. ಇನ್ನು ಕೊಡಗಿನಲ್ಲಿ ಪರಿಸರ ಸಂರಕ್ಷಣೆ ಮಾಡುವ ಕೆಲಸ ತುಂಬಾ ಮುಖ್ಯವಾಗಿದೆ ಅದನ್ನು ಮಾಡುತ್ತೇವೆ ಎಂದರು.
ಬೆಲೆ ಏರಿಕೆಯಿಂದ ಜನರಿಗೆ ಸಂಕಷ್ಟ : ರಾಜ್ಯ ಸರ್ಕಾರ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದ ಯದುವೀರ್, ಕೇವಲ ಹಾಲಿನ ಧರ ಏರಿಕೆ ಮಾತ್ರವಲ್ಲದೆ ಎಲ್ಲಾ ವಸ್ತುಗಳ ಧರವನ್ನು ಏರಿಕೆ ಮಾಡಲಾಗುತ್ತಿದೆ. ಈ ಬಗ್ಗೆ ಈ ಹಿಂದೆಯೂ ವಿರೋಧ ವ್ಯಕ್ತಪಡಿಸಿದೇವೆ. ಬೆಲೆ ಏರಿಕೆಯಿಂದ ಬಡವರು ಹಾಗೂ ಮಧ್ಯಮವರ್ಗದ ಜನರಿಗೆ ತೊಂದರೆಯಾಗುತ್ತಿದೆ. ಬೆಲೆ ಏರಿಕೆ ಮಾಡದಂತೆ ಈಗಾಗಲೇ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ರಾಜ್ಯ ಸರ್ಕಾರ ಅದನ್ನು ಪರಿಗಣಿಸಿ ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.