ರಾಜ್ಯ

ಸಂವಿಧಾನದ ರಕ್ಷಣೆ ಎಂದರೆ ಅದು ಜನರ ರಕ್ಷಣೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಸಂವಿಧಾನ ರಕ್ಷಣೆ ಎಂದರೆ ಅದು ಜನರ ರಕ್ಷಣೆ ಮಾಡಿದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದ ಗೃಹ ಕಛೇರಿಯಲ್ಲಿಂದು ನಡೆದ ಸಂವಿಧಾನ ಜಾಗೃತಿ ಜಾಥಾ ಹಿನ್ನಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನಕ್ಕೆ ಸಂವಿಧಾನ ವನ್ನು ಬಲಪಡಿಸಬೇಕಾಗಿದೆ

75 ನೇ ವರ್ಷದ ಸಂವಿಧಾನ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಜಾಗೃತಿ ಬಗೆಗೆ ರಾಜ್ಯಾದ್ಯಂತ ಗ್ರಾಮ ಪಂಚಾಯತಿ, ಹೋಬಳಿ ಕೇಂದ್ರ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜಾಥಾಕ್ಕೆ ಚಾಲನೆ ನೀಡುತಿದ್ದು, ಸಂವಿಧಾನ ತಜ್ಞರು,ವಿಚಾರವಾದಿಗಳಿಂದ ಭಾಷಣ ಕಾರ್ಯಗಳು ನಡೆಯಲಿವೆ,

ರಾಜ್ಯದ 6 ಸಾವಿರ ಗ್ರಾ.ಪಂ.ಗಳಲ್ಲಿ ಸಂಚರಿಸುವ ಸಂವಿಧಾನ ಜಾಗೃತಿ ಜಾಥಾ ಸ್ಥಬ್ದ ಚಿತ್ರ ವಾಹನಗಳು ಬೆಂಗಳೂರಿನಲ್ಲಿ ಸಮಾವೇಶಗೊಂಡು ಜನವರಿ 24 ಹಾಗೂ 25 ರಂದು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಹಾಗೂ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿವೆ.

ಸಂವಿಧಾನದ ಮೂಲ ಅಂಶಗಳಾದ ಧರ್ಮನಿರಪೇಕ್ಷತೆ,ಜಾತ್ಯಾತೀತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಒದಗಿಸುವ ವಿಧಿಗಳು, ಮೂಲಭೂತ ಹಕ್ಕುಗಳು,ಕರ್ತವ್ಯಗಳು ಮತ್ತು ರಾಜ್ಯ ನಿರ್ದೇಶಕ ತತ್ವಗಳನ್ನು ಖಾತ್ರಿಪಡಿಸುವ ವಿಷಯಗಳ ಬಗೆಗೆ ಸಮ್ಮೇಳನದಲ್ಲಿ ಚರ್ಚೆಗಳು ನಡೆಯಲಿವೆ.

ಸಮಾವೇಶದಲ್ಲಿ ಸಂವಿಧಾನ ರಚನಾ ಸಭೆಯಲ್ಲಿ ನಡೆದ ಅರ್ಥಪೂರ್ಣ ಚರ್ಚೆಗಳ 10 ವಾಲ್ಯೂಮ್‌ ಗಳ ಪುಸ್ತಕಗಳು ಮುದ್ರಿತವಾಗಿದ್ದು ಪುಸ್ತಕಗಳ ಬಿಡುಗಡೆಯೂ ಇರಲಿದೆ.

ಸಂವಿಧಾನದ ಅಂಗೀಕಾರದ ಮುನ್ನಾದಿನ ಅಂಬೇಡ್ಕರರು ರಚನಾ ಸಭೆಯಲ್ಲಿ ಮಾಡಿದ ಅಮೋಘ ಭಾಷಣದಲ್ಲಿ ಮುಂದೆ ಬರಬಹುದಾದ ಸಮಸ್ಯೆಗಳ ಬಗೆಗೂ ಪ್ರಸ್ತಾಪಿಸಿದ್ದಾರೆ. ಆ ಎಲ್ಲಾ ಮಹತ್ವದ ಅಂಶಗಳನ್ನು ಪುಸ್ತಕಗಳು ಒಳಗೊಂಡಿರುವುದರೊಂದಿಗೆ ಡಾ.ಬಾಬು ರಾಜೇಂದ್ರ ಪ್ರಸಾದ್, ರಾಜಾಜಿ ಅಂತಹವರೂ ಸೇರಿದಂತೆ ಸಂವಿಧಾನ ರಚನಾ ಸಭೆಯ ಮುತ್ಸದ್ದಿಗಳ ಮಾತುಗಳು ಪುಸ್ತಕದಲ್ಲಿರಲಿವೆ ಎಂದರು.

ಪ್ರಮುಖವಾಗಿ ಸಂವಿಧಾನ ಜಾರಿಗೆ ಬಂದ 75 ವರ್ಷಗಳಲ್ಲಿ ಸಂವಿಧಾನದ ಆಶಯ ಹಾಗೂ ಧ್ಯೇಯೋದ್ದೇಶ ಎಷ್ಟರ ಮಟ್ಟಿಗೆ ಈಡೇರಿದೆ ಎಂಬ ಅಂಶವೂ ಪ್ರಮುಖವಾಗಿ ಚರ್ಚೆಯಾಗಲಿದೆ ಎಂದರು.

ಸಂವಿಧಾನವನ್ನು ದುರ್ಬಲಗೊಳಿಸಲು ಪಟ್ಟಭದ್ರ ಹಿತಾಸಕ್ತಿಗಳು ಹವಣ
ಹವಣಿಸುತಿದ್ದು,ಸಂವಿಧಾನಕ್ಕೆ ವಿರುದ್ದವಾದ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.ಅಂತಹವರಿಗೆ ಸಂವಿಧಾನ ಜಾಥಾ ಉತ್ತರ ಕೊಡಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ, ಪಶುಸಂಗೋಪನ ಸಚಿವರಾದ ವೆಂಕಟೇಶ್, ನಗರಾಭಿವೃದ್ಧಿ ಸಚಿವರಾದ ಸುರೇಶ್ ಭೈರತಿ ಶಾಸಕರುಗಳಾದ ತನ್ವೀರ್ ಸೇಠ್,ಹರೀಶ್ ಗೌಡ,ರವಿಶಂಕರ್,ಡಿ.ತಿಮ್ಮಯ್ಯ ಇದ್ದರು.

andolanait

Recent Posts

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

1 hour ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

1 hour ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

2 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

7 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

7 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

7 hours ago