ರಾಜ್ಯ

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಬಜೆಟ್‌ನಲ್ಲಿ ಕಾಂಗ್ರೆಸ್‌ ಸರ್ಕಾರದ ದೋಷಗಳನ್ನು ಸಮರ್ಥವಾಗಿ ಮಂಡನೆ ಮಾಡಲಾಗುವುದು. ಕಾಂಗ್ರೆಸ್‌ ಒಡೆದ ಮನೆಯಾಗಿದ್ದು, ಶಾಸಕರು ಬೀದಿಯಲ್ಲಿ ನಿಂತು ಧಮ್ಕಿ ಹಾಕುತ್ತಿದ್ದಾರೆ. ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಕ್ರಮ ನಡೆದಿದೆ. ಕಳೆದ ಮೂರು ಬಜೆಟ್‌ನಲ್ಲಿ ಅನುದಾನ ಘೋಷಣೆಯಾದರೂ ಬಿಡುಗಡೆಯಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆ ಮಟ್ಟದಲ್ಲಿ ಸಾಲ ಮಾಡಿದ್ದಾರೆ. ಹಿಂದೂಗಳ ಮೇಲೆ ಹಲ್ಲೆಯಾಗುತ್ತಿದೆ. ಬೆಂಗಳೂರಿನಲ್ಲಿ ಕಸದ ಸಮಸ್ಯೆ ಹೆಚ್ಚಿದೆ. ಕಂದಾಯ ಇಲಾಖೆಯಲ್ಲಿ ಇ ಖಾತಾ ಸಮಸ್ಯೆ ಇದೆ. ಈ ಎಲ್ಲ ವಿಷಯಗಳ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.

ರಾಜ್ಯ ಸರ್ಕಾರ ಮೂರೂವರೆ ಲಕ್ಷ ಕೋಟಿ ರೂ. ಸಾಲ ಮಾಡಿದೆ. ಹಿಂದಿನ ಎಲ್ಲ ಮುಖ್ಯಮಂತ್ರಿಗಳನ್ನು ಮೀರಿ ಸಿದ್ದರಾಮಯ್ಯ ಸಾಲ ಮಾಡಿದ್ದು, ಅವಧಿ ಮುಗಿಯುವ ವೇಳೆಗೆ ಸಾಲದ ಪ್ರಮಾಣ 6 ಲಕ್ಷ ಕೋಟಿ ರೂ. ಗೆ ಹೋಗಲಿದೆ. ಪ್ರತಿ ವ್ಯಕ್ತಿಯ ಮೇಲೆ 1 ಲಕ್ಷ ರೂ. ಸಾಲ ಇರಲಿದೆ. ಇಂತಹ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

17 mins ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

23 mins ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

43 mins ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

55 mins ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

1 hour ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

2 hours ago