r ashok
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಬಜೆಟ್‌ನಲ್ಲಿ ಕಾಂಗ್ರೆಸ್ ಸರ್ಕಾರದ ದೋಷಗಳನ್ನು ಸಮರ್ಥವಾಗಿ ಮಂಡನೆ ಮಾಡಲಾಗುವುದು. ಕಾಂಗ್ರೆಸ್ ಒಡೆದ ಮನೆಯಾಗಿದ್ದು, ಶಾಸಕರು ಬೀದಿಯಲ್ಲಿ ನಿಂತು ಧಮ್ಕಿ ಹಾಕುತ್ತಿದ್ದಾರೆ. ಕಾಂಗ್ರೆಸ್ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಕ್ರಮ ನಡೆದಿದೆ. ಕಳೆದ ಮೂರು ಬಜೆಟ್‌ನಲ್ಲಿ ಅನುದಾನ ಘೋಷಣೆಯಾದರೂ ಬಿಡುಗಡೆಯಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆ ಮಟ್ಟದಲ್ಲಿ ಸಾಲ ಮಾಡಿದ್ದಾರೆ. ಹಿಂದೂಗಳ ಮೇಲೆ ಹಲ್ಲೆಯಾಗುತ್ತಿದೆ. ಬೆಂಗಳೂರಿನಲ್ಲಿ ಕಸದ ಸಮಸ್ಯೆ ಹೆಚ್ಚಿದೆ. ಕಂದಾಯ ಇಲಾಖೆಯಲ್ಲಿ ಇ ಖಾತಾ ಸಮಸ್ಯೆ ಇದೆ. ಈ ಎಲ್ಲ ವಿಷಯಗಳ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.
ರಾಜ್ಯ ಸರ್ಕಾರ ಮೂರೂವರೆ ಲಕ್ಷ ಕೋಟಿ ರೂ. ಸಾಲ ಮಾಡಿದೆ. ಹಿಂದಿನ ಎಲ್ಲ ಮುಖ್ಯಮಂತ್ರಿಗಳನ್ನು ಮೀರಿ ಸಿದ್ದರಾಮಯ್ಯ ಸಾಲ ಮಾಡಿದ್ದು, ಅವಧಿ ಮುಗಿಯುವ ವೇಳೆಗೆ ಸಾಲದ ಪ್ರಮಾಣ 6 ಲಕ್ಷ ಕೋಟಿ ರೂ. ಗೆ ಹೋಗಲಿದೆ. ಪ್ರತಿ ವ್ಯಕ್ತಿಯ ಮೇಲೆ 1 ಲಕ್ಷ ರೂ. ಸಾಲ ಇರಲಿದೆ. ಇಂತಹ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…