ರಾಜ್ಯ

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ನಾಳೆಯಿಂದ ಮುಷ್ಕರ ನಡೆಸಲು ಮುಂದಾಗಿದ್ದು, ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಹಾಗೂ ಪ್ರಯಾಣಿಕರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದಾಗಿದ್ದಾರೆ.

ಈ ನಡುವೆ ಗುರುವಾರ ಗೈರಾದರೆ ‘ನೋ ವರ್ಕ್ ನೋ ಪೇ’ ಎಂದು ಕೆಎಸ್‌ಆರ್‌ಟಿಸಿ ಹೇಳಿದೆ. ಮತ್ತೊಂದೆಡೆ ನಾಳೆ ಸಂಜೆಯೊಳಗೆ ಬೇಡಿಕೆ ಈಡೇರದೇ ಇದ್ದರೆ, ಸಾಮೂಹಿಕ ರಾಜೀನಾಮೆ ಎಚ್ಚರಿಕೆ ನೀಡಿದೆ.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬಸ್ ಸಂಚಾರದ ಮೇಲೆ ಪರಿಣಾಮ ಬೀಳುವ ಆತಂಕ ವ್ಯಕ್ತವಾಗಿದೆ. ಆದರೆ ಕೆಎಸ್‍ಆರ್‍ಟಿಸಿ ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಎಲ್ಲಾ ಡಿಪೋಗಳಲ್ಲಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡುವ ಯೋಜನೆ ಹಾಕಿದೆ. ಅಗತ್ಯವಿದ್ದರೆ ಇತರ ಡಿವಿಷನ್‍ಗಳಿಂದ ಬಸ್‍ಗಳನ್ನು ತರಲು ಸಿದ್ಧತೆ ನಡೆಸಲಾಗಿದೆ.

ನೌಕರರು ತಮ್ಮ ಬೇಡಿಕೆಗಳನ್ನು ಮಂಡಿಸುವ ಹಕ್ಕು ಹೊಂದಿದ್ದರೂ, ಸಾರ್ವಜನಿಕರಿಗೆ ಸಮಸ್ಯೆ ಉಂಟುಮಾಡುವ ರೀತಿಯಲ್ಲಿ ಮುಷ್ಕರ ಅಥವಾ ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದು ಕೆಎಸ್‌ಆರ್‌ಟಿಸಿ ನಿಲುವು ಸ್ಪಷ್ಟಪಡಿಸಿದೆ. ನಾಳೆ ಸಾಮಾನ್ಯವಾಗಿ ಸಂಚರಿಸುವ ಪ್ರಯಾಣಿಕರು ಯಾವುದೇ ತೊಂದರೆ ಎದುರಿಸದಂತೆ ನೋಡಿಕೊಳ್ಳುವುದು ಸಾರಿಗೆ ಇಲಾಖೆಯ ಜವಾಬ್ದಾರಿ ಎಂದು ಎಂಡಿ ಒತ್ತಿ ಹೇಳಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

1 hour ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

4 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

9 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

9 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

9 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

9 hours ago