ಬೆಳಗಾವಿ: ಡಿಸೆಂಬರ್.16ರಂದು ಇಡೀ ದಿನ ಸುವರ್ಣ ಸೌಧದ ಮುಂದೆ ಧರಣಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸ್ವಾಮೀಜಿ ಅವರು, ಪಂಚಮಸಾಲಿ ಸಮಾಜದವರು ಶಾಂತಿಯುತವಾಗಿ ಹೋರಾಟ ನಡೆಸಿದ್ದೆವು. ಸಾರ್ವಜನಿಕರ ವೇಷದಲ್ಲಿ ಬಂದ ಪೊಲೀಸರೇ ನಮ್ಮವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸಮವಸ್ತ್ರದಲ್ಲಿದ್ದವರು ಲಾಠಿಚಾರ್ಜ್ ನಡೆಸಿದ್ದಾರೆ. ಇದು ವ್ಯವಸ್ಥಿತ ಷಡ್ಯಂತ್ರ ಎಂದು ಕಿಡಿಕಾರಿದರು.
ಹೋರಾಟ ನಿಯಂತ್ರಣ ತಪ್ಪುವ ಸಾಧ್ಯತೆಯಿದ್ದರೆ ಜಲಫಿರಂಗಿ ಬಳಸಬಹುದಿತ್ತು. ಲಾಠಿಚಾರ್ಜ್ ಮಾಡಲೇಬೇಕು ಎಂದು ಏಕೆ ನಿರ್ಧರಿಸಿದರು? ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಲಾಠಿಚಾರ್ಜ್ ಆದೇಶ ನೀಡಿದ್ದಾರೆ. ಅವರು ಆದೇಶ ನೀಡಿಲ್ಲ ಎಂದರೆ ಸಂಬಂಧಿಸಿದ ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಲಿ ಎಂದು ಆಗ್ರಹಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು. ಈವರೆಗಿನ ಯಾವುದೇ ಸರ್ಕಾರ ಲಿಂಗಾಯತರ ಮೇಲೆ ದಾಳಿ ಮಾಡಿರಲಿಲ್ಲ. ಸಿದ್ದರಾಮಯ್ಯ ಅವರೇ ಲಿಂಗಾಯತರ ಮೇಲೆ ಲಾಠಿ ಎತ್ತಿದ ಮೊದಲ ಸಿಎಂ. ಇವರೊಬ್ಬ ಲಿಂಗಾಯತ ವಿರೋಧಿ ನಾಯಕ ಎಂದು ವಾಗ್ದಾಳಿ ನಡೆಸಿದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…