ರಾಜ್ಯ

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರೋಧ ಫೆ.7ಕ್ಕೆ ನವದೆಹಲಿಯಲ್ಲಿ ಪ್ರತಿಭಟನೆ : ಸಿಎಂ ಸಿದ್ದರಾಮಯ್ಯ

ಹಂಪಿ : ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ರಾಜ್ಯಕ್ಕೆ ಕೇಂದ್ರ ಬಜೆಟ್ ನಿಂದ ಅನ್ಯಾಯವಾಗಿರುವ ಕಾರಣಕ್ಕೆ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ರಾಜ್ಯಕ್ಕೆ ಅನ್ಯಾಯವನ್ನು ಎಸೆಗಲಾಗಿದೆ. ರಾಜ್ಯಕ್ಕೆ ಬರಗಾಲದ ಪರಿಹಾರವಾಗಿ ಎನ್ ಡಿಆರ್ ಎಫ್ ನಿಂದ 4663 ಕೋಟಿ ರೂ. ಮೊತ್ತವನ್ನು ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳೂ ಕಳೆದಿದ್ದರೂ, ಕೇಂದ್ರದಿಂದ ಯಾವ ಸ್ಪಂದನೆಯೂ ದೊರೆತಿಲ್ಲ.

ಈ ಎಲ್ಲ ಕಾರಣಗಳಿಗಾಗಿ ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ತಾನೂ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ದೇಶ ಅಖಂಡವಾಗಿರಬೇಕು: ಸಂಸದ ಡಿ.ಕೆ.ಸುರೇಶ್ ಅವರ ದೇಶವನ್ನು ಇಬ್ಭಾಗವಾಗಿಸುವ ಹೇಳಿಕೆ ಕೇಂದ್ರ ಅಧಿವೇಶನದಲ್ಲಿ ಚರ್ಚೆಯಾಗಿರುವ ಬಗ್ಗೆ ಬಿಜೆಪಿಯವರು ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ದೇಶವನ್ನು ಇಬ್ಬಾಗವಾಗಿಸುವ ಉದ್ದೇಶದಿಂದ ಸಂಸದ ಡಿ.ಕೆ.ಸುರೇಶ್ ಅವರು ಆ ಹೇಳಿಕೆಯನ್ನು ನೀಡಿರುವುದಿಲ್ಲ. ದೇಶ ಅಖಂಡವಾಗಿರಬೇಕೆಂಬುದು ನಾವು ಬಯಸುತ್ತೇವೆ. ಬಿಜೆಪಿಯವರು ಕೇಂದ್ರ ಬಜೆಟ್ ನಲ್ಲಿ ಬಡವರು, ರೈತರು, ನಿರುದ್ಯೋಗ ವಿಷಯಗಳ ಬಗ್ಗೆ ಚರ್ಚೆ ಮಾಡಿ, ಪರಿಹಾರ ನೀಡುವ ಬದಲು ಇಂತಹ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತಾರೆ ಎಂದರು.

ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದರೂ, ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 5495 ಕೋಟಿ ರೂ. ಹಾಗೂ ಇಲ್ಲಿನ ಫೆರಿಫೆರಲ್ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಪ್ರಮುಖ ಯೋಜನೆಗಳಿಗೆ 6000 ಕೋಟಿ ರೂ. ಒದಗಿಸುವ ಸಾಧ್ಯತೆ ಇತ್ತು. ಆದರೆ ಯಾವುದೇ ಅನುದಾನವನ್ನು ನೀಡಿಲ್ಲ ಎಂದು ತಿಳಿಸಿದರು.

ಜನರಿಗಾಗಿ ಸಾಂಸ್ಕೃತಿಕ ಉತ್ಸವ : ಇಂದಿನಿಂದ ಮೂರು ದಿನಗಳ ಕಾಲ ಹಂಪ ಉತ್ಸವ ನಡೆಯಲಿದೆ. ಜನರಿಗಾಗಿ ಹಾಗೂ ಕಲಾವಿದರಿಗಾಗಿ ಉತ್ಸವಗಳನ್ನು ಆಚರಿಸಲಾಗುತ್ತದೆ. ಬರಗಾಲವಿದ್ದರೂ ಉತ್ಸವಗಳನ್ನು ಮಾಡದೇ ಇರಲು ಸಾಧ್ಯವಿಲ್ಲ. ಇದೊಂದು ಸಾಂಸ್ಕೃತಿಕ ಉತ್ಸವ ಎಂದು ತಿಳಿಸಿದರು.

andolanait

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

5 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

6 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

6 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

6 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

8 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

8 hours ago