ರಾಜ್ಯ

ಲಾಲ್‌ಬಾಗ್‌ ಉಳಿಸಲು ನವೆಂಬರ್‌ 2 ರಂದು ಪ್ರತಿಭಟನೆ : ಆರ್.ಅಶೋಕ

ಬಿಜೆಪಿಯ ಶಾಸಕರು ಹಾಗೂ ವಿವಿಧ ಸಂಘಟನೆಗಳು ಭಾಗಿ

ಬೆಂಗಳೂರು : ಸುರಂಗ ರಸ್ತೆ ಯೋಜನೆಯನ್ನು ವಿರೋಧಿಸಿ ಲಾಲ್‌ಬಾಗ್‌ನಲ್ಲಿ ನವೆಂಬರ್‌ 2 ರ ಬೆಳಗ್ಗೆ 8 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆ ಯೋಜನೆಯ ಹೆಸರು ಕೇಳಿದರೆ ಜನರು ಭೀತಿಗೊಳ್ಳುತ್ತಿದ್ದಾರೆ. ಎಲ್ಲಿ ಯಾರ ಮನೆ ಹೋಗಲಿದೆ ಎಂದು ತಿಳಿಯುತ್ತಿಲ್ಲ. ಲಾಲ್‌ಬಾಗ್‌ನಲ್ಲಿ 6 ಎಕರೆ ಜಮೀನು ಕಬಳಿಕೆ ಮಾಡಿ ಯೋಜನೆ ಮಾಡಲಾಗುತ್ತದೆ. ಇದಕ್ಕೆ ಯಾವ ಇಲಾಖೆಯೂ ಅನುಮತಿ ನೀಡಿಲ್ಲ. ಬಿಹಾರ ಚುನಾವಣೆ ಬಂದಿರುವುದರಿಂದ ಹಣ ಮಾಡಲು ಈ ಯೋಜನೆ ಜಾರಿ ಮಾಡುತ್ತಿರಬಹುದು. ಲಾಲ್‌ಬಾಗ್‌ ಉಳಿಸಿ, ಬೆಂಗಳೂರು ರಕ್ಷಿಸಿ ಎಂಬ ಘೋಷಣೆಯಡಿ ಇದೇ ನವೆಂಬರ್‌ 2 ರ ಭಾನುವಾರ ಬೆಳಗ್ಗೆ 8 ಗಂಟೆಗೆ ಲಾಲ್‌ಬಾಗ್‌ನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ಎಲ್ಲ ಶಾಸಕರು ಸಭೆ ಸೇರಿ ಚರ್ಚೆ ಮಾಡುತ್ತೇವೆ. ಈ ಬಗ್ಗೆ ಹೋರಾಟ ಮಾಡುವ ಬಗ್ಗೆ ಚರ್ಚೆ ಮಾಡುತ್ತೇವೆ. ಬಿಜೆಪಿ ಅವಧಿಯಲ್ಲಿ ರಸ್ತೆ ದುರಸ್ತಿಗೆ 8,000 ಕೋಟಿ ರೂ. ನೀಡಲಾಗಿತ್ತು. ಈಗ ಕಾಂಗ್ರೆಸ್‌ ಸರ್ಕಾರ ಡಾಂಬರೀಕರಣ ಬಿಟ್ಟು ಹೊಸದಾಗಿ ರಸ್ತೆ ನಿರ್ಮಿಸಬೇಕಿದೆ. ಸಿಎಂ ಸಿದ್ದರಾಮಯ್ಯ ಒಮ್ಮೊಮ್ಮೆ ಒಂದೊಂದು ರೀತಿಯ ಅನುದಾನದ ಬಗ್ಗೆ ಹೇಳುತ್ತಿದ್ದಾರೆ. ಕಾಟಾಚಾರಕ್ಕೆ ಬ್ರ್ಯಾಂಡ್‌ ಬೆಂಗಳೂರಿನ ಘೋಷಣೆ ಮಾಡಲಾಗುತ್ತಿದೆ. ಡಿ.ಕೆ.ಶಿವಕುಮಾರ್‌ ಯಾವಾಗಲೂ ಬ್ರ್ಯಾಂಡ್‌ ಬಗ್ಗೆ ಹೇಳುತ್ತಾರೆ. ಅಧಿಕಾರಿಗಳಂತೂ ಇವರ ಮಾತನ್ನು ಕೇಳುತ್ತಿಲ್ಲ ಎಂದರು.

ಸಂಸದ ತೇಜಸ್ವಿ ಸೂರ್ಯ ಅವರನ್ನು ಅವಹೇಳನ ಮಾಡುವುದು ತಪ್ಪು. ಇದು ಒಂದು ಲೋಕಸಭಾ ಕ್ಷೇತ್ರಕ್ಕೆ ಮಾಡುವ ಅಪಮಾನ. ಸಿಎಂ ಹಾಗೂ ಡಿಸಿಎಂ ಗೌರವ ಕೊಟ್ಟು ಮಾತಾಡುವುದನ್ನು ಕಲಿಯಲಿ ಎಂದರು.

ಇದನ್ನೂ ಓದಿ:-ಸಿದ್ದು ಸ್ಪರ್ಧೆಗೆ ಯಾರ ವಿರೋಧವೂ ಇಲ್ಲ : ಬೈರತಿ ಸುರೇಶ್

ಧರ್ಮಸ್ಥಳ ಕುರಿತು ಅಪಪ್ರಚಾರ
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿರುವುದು ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮವಾಗಿದೆ. ಅಪಪ್ರಚಾರ ಮಾಡಿರುವವರಿಗೆ ಶಿಕ್ಷೆಯಾಗಬೇಕು. ಅದಕ್ಕಾಗಿ ಸರ್ಕಾರ ಸೂಕ್ತ ಕ್ರಮ ವಹಿಸಬೇಕಿದೆ. ಡಿ.ಕೆ.ಶಿವಕುಮಾರ್‌ ಈ ಬಗ್ಗೆ ಮಾಧ್ಯಮಗಳ ಮುಂದೆ ಪ್ರಶ್ನೆ ಕೇಳುವ ಬದಲು, ಸಚಿವ ಸಂಪುಟದಲ್ಲೇ ಪ್ರಶ್ನೆ ಕೇಳಬೇಕಿತ್ತು. ಎಸ್‌ಐಟಿ ರಚಿಸುವುದನ್ನು ಅವರು ಮೊದಲೇ ತಡೆಯಬಹುದಿತ್ತು ಎಂದರು.

ನಿವೇಶನಗಳಿಗೆ, ಖಾತಾಗೆ ಸಂಬಂಧಿಸಿದಂತೆ ವಸೂಲಿ ಮಾಡಲಾಗುತ್ತಿದೆ. ಒಸಿ, ಸಿಸಿಗೆ ಕಮಿಶನ್‌ ನಿಗದಿಯಾಗಿದೆ. ಯಾರೂ ಮನೆ ಕಟ್ಟಲು ಸಾಧ್ಯವಿಲ್ಲ. ಅಭಿವೃದ್ಧಿ ಶುಲ್ಕವನ್ನು 4-5 ಲಕ್ಷ ರೂ. ಗೆ ಏರಿಸಲಾಗಿದೆ. ಕರ್ನಾಟಕವೆಂದರೆ ಕಲೆಕ್ಷನ್‌ ಸೆಂಟರ್‌ ಆಗಿದೆ ಎಂದರು.

ಕಾಂಗ್ರೆಸ್‌ ಸರ್ಕಾರ ವಯನಾಡಿನಲ್ಲಿದೆ. ಹಿಂದೆ ಆನೆಯಿಂದ ಸತ್ತಿದ್ದಕ್ಕೆ ಪರಿಹಾರ ಕೊಟ್ಟಿದ್ದರು. ಈಗ ವಯನಾಡಿನಲ್ಲಿ ಪ್ರವಾಸ ಮಾಡಿ ಎಂದು ಜಾಹೀರಾತು ನೀಡುತ್ತಿದ್ದಾರೆ. ಅಲ್ಲಿ ಕರ್ನಾಟಕದ ಯಾವುದೇ ಸ್ಥಳ ಇಲ್ಲ. ಜೋಗ, ಹಂಪಿ, ಕೊಡಗು, ಗೋಕರ್ಣದಲ್ಲಿರುವಂತಹ ಸ್ಥಳ ವಯನಾಡಿನಲ್ಲಿ ಇಲ್ಲ. ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ಅವರ ಫ್ಲೆಕ್ಸ್‌ ನೋಡಲು ಜನರು ಅಲ್ಲಿಗೆ ಪ್ರವಾಸ ಹೋಗಬೇಕಿದೆ. ಮೈಸೂರು ಅರಮನೆ ಬಗ್ಗೆ ಪ್ರಚಾರ ಮಾಡುವುದನ್ನು ಬಿಟ್ಟು ವಯನಾಡಿನ ರಾಹುಲ್‌ ಗಾಂಧಿ ಅರಮನೆ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

5 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

5 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

5 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

5 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

5 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

7 hours ago