ಶಿವಮೊಗ್ಗ : ಬಿಜೆಪಿ ಪ್ರತಿಭಟನೆ ವೇಳೆ ಕರ್ತವ್ಯ ನಿರತ ಎಎಸ್‌ಐ ಕುತ್ತಿಗೆಯಲ್ಲಿದ್ದ 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು ಅಪಹರಿಸಿದ್ದಾರೆ.
ಗುರುವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಎಎಸ್‌ಐ ಅಮೃತಾಬಾಯಿ ಅವರು ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದರು. ತಳ್ಳಾಟ-ನೂಕಾಟದ ವೇಳೆ ಕಳ್ಳರು ಅವರ ಮಾಂಗಲ್ಯ ಸರವನ್ನು ಎಗರಿಸಿದ್ದಾರೆ. ನಂತರ ಎಚ್ಚೆತ್ತುಕೊಂಡ ಪೊಲೀಸರು ಪ್ರತಿಭಟನೆಯ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಮಾಧ್ಯಮಗಳ ವಿಡಿಯೋ ಕ್ಲಿಪ್ಪಿಂಗ್‌ಗಳನ್ನು ಪರಿಶೀಲಿಸಿ ಕಳ್ಳರ ಪತ್ತೆಗೆ ಮುಂದಾಗಿದ್ದಾರೆ.





