Mysore
24
clear sky

Social Media

ಬುಧವಾರ, 04 ಮಾರ್ಚ್ 2026
Light
Dark

ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್ ಅಧ್ಯಕ್ಷ ಆಯಾತೊಲ್ಲಾ ಆಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ನಿಗಾ ವಹಿಸುವ ಪರಿಸ್ಥಿತಿ ಸದ್ಯಕ್ಕೆ ಕಂಡು ಬಂದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇರಾನ್‍ನ ಅಧ್ಯಕ್ಷ ಖಮೇನಿಯವರ ಹತ್ಯೆಯ ಬಳಿಕ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ನಿಗಾ ಇಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಮುಖ್ಯ ಕಾರ್ಯದರ್ಶಿಯವರಿಗೆ ಮಾಹಿತಿ ಬಂದಿರಬಹುದು. ಪೊಲೀಸ್ ಮಹಾನಿರ್ದೇಶಕರು ಇಲ್ಲಿಯವರೆಗೂ ಅಂತಹ ವಿಚಾರವನ್ನು ನಮ ಗಮನಕ್ಕೆ ತಂದಿಲ್ಲ ಎಂದರು.

ಇಂತಹ ವಿಚಾರಗಳು ರಾಜನೀತಿಗಳಾಗಿವೆ. ಒಂದೊಂದು ಸರ್ಕಾರಕ್ಕೆ ತನ್ನದೇ ಆದ ನೀತಿಗಳಿರುತ್ತವೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಒಂದು ರೀತಿಯ ವಿದೇಶಾಂಗ ನೀತಿಯಿತ್ತು. ಈಗ ಬಿಜೆಪಿ ಸರ್ಕಾರ ಇದೆ. ಅವರದು ಒಂದು ರೀತಿಯ ವಿದೇಶಾಂಗ ನೀತಿ ಇರುತ್ತದೆ. ಅದರ ಆಧಾರದ ಮೇಲೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಮಾಹಿತಿ ನೀಡುತ್ತದೆ. ಸದ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡುವಂತಹ ಸನ್ನಿವೇಶಗಳು ಕಂಡು ಬಂದಿಲ್ಲ, ಒಂದು ವೇಳೆ ಕಂಡು ಬಂದರೆ ಸಂಬಂಧ ಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

Tags:
error: Content is protected !!