ಬೆಂಗಳೂರು: ಇರಾನ್ ಅಧ್ಯಕ್ಷ ಆಯಾತೊಲ್ಲಾ ಆಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ನಿಗಾ ವಹಿಸುವ ಪರಿಸ್ಥಿತಿ ಸದ್ಯಕ್ಕೆ ಕಂಡು ಬಂದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇರಾನ್‍ನ ಅಧ್ಯಕ್ಷ ಖಮೇನಿಯವರ ಹತ್ಯೆಯ ಬಳಿಕ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ನಿಗಾ ಇಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಮುಖ್ಯ ಕಾರ್ಯದರ್ಶಿಯವರಿಗೆ ಮಾಹಿತಿ ಬಂದಿರಬಹುದು. ಪೊಲೀಸ್ ಮಹಾನಿರ್ದೇಶಕರು ಇಲ್ಲಿಯವರೆಗೂ ಅಂತಹ ವಿಚಾರವನ್ನು ನಮ ಗಮನಕ್ಕೆ ತಂದಿಲ್ಲ ಎಂದರು.
ಇಂತಹ ವಿಚಾರಗಳು ರಾಜನೀತಿಗಳಾಗಿವೆ. ಒಂದೊಂದು ಸರ್ಕಾರಕ್ಕೆ ತನ್ನದೇ ಆದ ನೀತಿಗಳಿರುತ್ತವೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಒಂದು ರೀತಿಯ ವಿದೇಶಾಂಗ ನೀತಿಯಿತ್ತು. ಈಗ ಬಿಜೆಪಿ ಸರ್ಕಾರ ಇದೆ. ಅವರದು ಒಂದು ರೀತಿಯ ವಿದೇಶಾಂಗ ನೀತಿ ಇರುತ್ತದೆ. ಅದರ ಆಧಾರದ ಮೇಲೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಮಾಹಿತಿ ನೀಡುತ್ತದೆ. ಸದ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡುವಂತಹ ಸನ್ನಿವೇಶಗಳು ಕಂಡು ಬಂದಿಲ್ಲ, ಒಂದು ವೇಳೆ ಕಂಡು ಬಂದರೆ ಸಂಬಂಧ ಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…