ತುಮಕೂರು: ಹೇಮಾವತಿ ಲಿಂಕ್ ಕೆನಾಲ್‌ಗೆ ವಿರೋಧಿಸಿ ಜನಪ್ರತಿನಿಧಿಗಳು, ರೈತಮುಖಂಡರು, ಸ್ವಾಮೀಜಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ರೈತ ಮುಖಂಡರು ನಡೆಸುತ್ತಿದ್ದ ಪ್ರತಿಭಟನೆಗೆ ಶಾಸಕ ಸುರೇಶ್ ಗೌಡ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ. ಹೇಮಾವತಿ ಲಿಂಕ್ ಕೆನಾಲ್ ಆರಂಭಕ್ಕೆ ವಿರೋಧಿಸಿರುವ ಪ್ರತಿಭಟನಾಕಾರರು, ರಸ್ತೆ ತಡೆ ನಡೆಸಿ, ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯಲ್ಲಿ ಅಡ್ಡಲಾಗಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಏನಿದು ಹೇಮಾವತಿ ಲಿಂಕ್ ಕೆನಾಲ್: ತುಮಕೂರು ಜಿಲ್ಲೆಗೆ ಸರಜರಾಜಾಗುವ ಹೇಮಾವತಿ ನದಿ ನೀರನ್ನು ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಮೂಲಕ ಮಾಗಡಿಗೆ ತೆಗೆದುಕೊಂಡು ಹೋಗಲಾಗುತ್ತದೆ. ಇದು ಜಿಲ್ಲೆಯ ರೈತರ ಅಳಿವು, ಉಳಿವಿನ ಪ್ರಶ್ನೆಯಾಗಿದ್ದು, ಗುಬ್ಬಿ, ತುಮಕೂರು ಸೇರಿದಂತೆ ಎಲ್ಲಾ ತಾಲ್ಲೂಕುಗಳಿಗೂ ತೊಂದರೆಯಾಗಲಿದೆ.





