ರಾಜ್ಯ

ತುಮಕೂರು| ಹೇಮಾವತಿ ಲಿಂಕ್‌ ಕೆನಾಲ್‌ ವಿರೋಧಿಸಿ ತೀವ್ರಗೊಂಡ ಪ್ರತಿಭಟನೆ

ತುಮಕೂರು: ಹೇಮಾವತಿ ಲಿಂಕ್‌ ಕೆನಾಲ್‌ಗೆ ವಿರೋಧಿಸಿ ಜನಪ್ರತಿನಿಧಿಗಳು, ರೈತಮುಖಂಡರು, ಸ್ವಾಮೀಜಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ರೈತ ಮುಖಂಡರು ನಡೆಸುತ್ತಿದ್ದ ಪ್ರತಿಭಟನೆಗೆ ಶಾಸಕ ಸುರೇಶ್‌ ಗೌಡ ಸೇರಿದಂತೆ ಹಲವರು ಸಾಥ್‌ ನೀಡಿದ್ದಾರೆ. ಹೇಮಾವತಿ ಲಿಂಕ್‌ ಕೆನಾಲ್‌ ಆರಂಭಕ್ಕೆ ವಿರೋಧಿಸಿರುವ ಪ್ರತಿಭಟನಾಕಾರರು, ರಸ್ತೆ ತಡೆ ನಡೆಸಿ, ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯಲ್ಲಿ ಅಡ್ಡಲಾಗಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಏನಿದು ಹೇಮಾವತಿ ಲಿಂಕ್‌ ಕೆನಾಲ್:‌ ತುಮಕೂರು ಜಿಲ್ಲೆಗೆ ಸರಜರಾಜಾಗುವ ಹೇಮಾವತಿ ನದಿ ನೀರನ್ನು ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌ ಯೋಜನೆ ಮೂಲಕ ಮಾಗಡಿಗೆ ತೆಗೆದುಕೊಂಡು ಹೋಗಲಾಗುತ್ತದೆ. ಇದು ಜಿಲ್ಲೆಯ ರೈತರ ಅಳಿವು, ಉಳಿವಿನ ಪ್ರಶ್ನೆಯಾಗಿದ್ದು, ಗುಬ್ಬಿ, ತುಮಕೂರು ಸೇರಿದಂತೆ ಎಲ್ಲಾ ತಾಲ್ಲೂಕುಗಳಿಗೂ ತೊಂದರೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

29 mins ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

1 hour ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

1 hour ago

ಹೊಸ ಸುಂಕ ಸಾರಿದ ಅಮೆರಿಕ, ಈ ಬಾರಿ ಯಾವುದರ ಮೇಲೆ ಟ್ರಂಪ್‌ ಕಣ್ಣು?

ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…

1 hour ago

HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಲ್ಲ

ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ…

2 hours ago

ಕೊಡಗು | ಟ್ರೆಕ್ಕಿಂಗ್ ಹೊರಟಿದ್ದ 36 ವರ್ಷದ ಮಹಿಳೆ ನಾಪತ್ತೆ

ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ…

4 hours ago