Mysore
33
few clouds

Social Media

ಮಂಗಳವಾರ, 24 ಮಾರ್ಚ್ 2026
Light
Dark

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ.

ಈ ಕುರಿತು ವಿಧಾನಪರಿಷತ್‌ನಲ್ಲಿ ಮಾತನಾಡಿದ ಅವರು, ಮೈಸೂರು ನಗರದಲ್ಲಿ 200ಕ್ಕೂ ಹೆಚ್ಚು ಪಾರಂಪರಿಕ ಕಟ್ಟಡಗಳಿದ್ದವು. ಪ್ರಸ್ತುತ ನೂರಕ್ಕೆ ಇಳಿಕೆ ಕಂಡಿವೆ. ಎಲ್ಲಾ ಕಟ್ಟಡಗಳನ್ನು ಕೆಡವುಲಾಗಿದೆ. ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ಹೇಳಿದರು.

ಮಹಾರಾಜರ ಕಾಲದಲ್ಲಿ ದಸರಾ ವೇಳೆ ಎಲ್ಲಾ ಕಟ್ಟಡಗಳಿಗೂ ಸುಣ್ಣ-ಬಣ್ಣ ಬಳಿದು ನಿರ್ವಹಣೆ ಮಾಡುತ್ತಿದ್ದರು. ಇತ್ತೀಚಿನ ವರ್ಷಗಳಲ್ಲಿ ಅನುದಾನದ ಕೊರತೆಯಿಂದ ನಿರ್ವಹಣೆ ಕುಂಠಿತವಾಗಿದೆ. ಎಲ್ಲಾ ಪ್ರವಾಸಿಗರು ವಿದೇಶಕ್ಕೆ ತೆರಳುವುದು ಅಲ್ಲಿನ ಪಾರಂಪರಿಕ ಕಟ್ಟಡಗಳ ವೀಕ್ಷಣೆ ಮುಖ್ಯ ಉದ್ದೇಶವಾಗಿರುತ್ತದೆ ಎಂದು ಹೇಳಿದರು.

ನಮ್ಮ ಪಾರಂಪರಿಕ ಕಟ್ಟಡಗಳನ್ನು ರಕ್ಷಣೆ ಮಾಡದಿದ್ದರೆ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸವನ್ನು ಮುಂದಿನ ಪೀಳಿಗೆಗೆ ತಿಳಿಸಲು ಸಾಧ್ಯವಾಗುವುದಿಲ್ಲ. ಜಿಲ್ಲಾಡಳಿತ ಬಳಿ ಇರುವ ಅನುದಾನ ಸಾಲದು. ಆಸ್ತಿ ತೆರಿಗೆಯಲ್ಲಾದರು ಅನುದಾನ ಒದಗಿಸಲು ಮಂತ್ರಿಗಳ ಅವಕಾಶ ಕಲ್ಪಿಸಬೇಕು ಎಂದು ಕೋರಿದರು.

 

Tags:
error: Content is protected !!