ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಈ ಕುರಿತು ವಿಧಾನಪರಿಷತ್‌ನಲ್ಲಿ ಮಾತನಾಡಿದ ಅವರು, ಮೈಸೂರು ನಗರದಲ್ಲಿ 200ಕ್ಕೂ ಹೆಚ್ಚು ಪಾರಂಪರಿಕ ಕಟ್ಟಡಗಳಿದ್ದವು. ಪ್ರಸ್ತುತ ನೂರಕ್ಕೆ ಇಳಿಕೆ ಕಂಡಿವೆ. ಎಲ್ಲಾ ಕಟ್ಟಡಗಳನ್ನು ಕೆಡವುಲಾಗಿದೆ. ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ಹೇಳಿದರು.
ಮಹಾರಾಜರ ಕಾಲದಲ್ಲಿ ದಸರಾ ವೇಳೆ ಎಲ್ಲಾ ಕಟ್ಟಡಗಳಿಗೂ ಸುಣ್ಣ-ಬಣ್ಣ ಬಳಿದು ನಿರ್ವಹಣೆ ಮಾಡುತ್ತಿದ್ದರು. ಇತ್ತೀಚಿನ ವರ್ಷಗಳಲ್ಲಿ ಅನುದಾನದ ಕೊರತೆಯಿಂದ ನಿರ್ವಹಣೆ ಕುಂಠಿತವಾಗಿದೆ. ಎಲ್ಲಾ ಪ್ರವಾಸಿಗರು ವಿದೇಶಕ್ಕೆ ತೆರಳುವುದು ಅಲ್ಲಿನ ಪಾರಂಪರಿಕ ಕಟ್ಟಡಗಳ ವೀಕ್ಷಣೆ ಮುಖ್ಯ ಉದ್ದೇಶವಾಗಿರುತ್ತದೆ ಎಂದು ಹೇಳಿದರು.
ನಮ್ಮ ಪಾರಂಪರಿಕ ಕಟ್ಟಡಗಳನ್ನು ರಕ್ಷಣೆ ಮಾಡದಿದ್ದರೆ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸವನ್ನು ಮುಂದಿನ ಪೀಳಿಗೆಗೆ ತಿಳಿಸಲು ಸಾಧ್ಯವಾಗುವುದಿಲ್ಲ. ಜಿಲ್ಲಾಡಳಿತ ಬಳಿ ಇರುವ ಅನುದಾನ ಸಾಲದು. ಆಸ್ತಿ ತೆರಿಗೆಯಲ್ಲಾದರು ಅನುದಾನ ಒದಗಿಸಲು ಮಂತ್ರಿಗಳ ಅವಕಾಶ ಕಲ್ಪಿಸಬೇಕು ಎಂದು ಕೋರಿದರು.
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ…