ರಾಜ್ಯ

ಬೇಡಿಕೆ ಇರುವ ಉದ್ಯೋಗಕ್ಕೆ ತಕ್ಕಂತೆ ತರಬೇತಿ ನೀಡಿ ; ಸಿಎಂ

ಮುಂದಿನ ದಿನಗಳಲ್ಲಿ ಎಂ.ಎಸ್.ಎಂ. ಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಮುಂದಿನ ದಿನಗಳಲ್ಲಿ ಎಂ.ಎಸ್.ಎಂ. ಇ ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ವತಿಯಿಂದ ಬೆಂಗಳೂರಿನ ಜ್ಞಾನಭಾರತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಅಮೃತ ಮಹೋತ್ಸವ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸಂಸ್ಥೆಯ ಬೇಡಿಕೆಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ ಸಭೆ ಕರೆದು ಈ ಬಗ್ಗೆ ತೀರ್ಮಾನಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಉದ್ಯೋಗಗಳಿಗೆ ಅಭ್ಯರ್ಥಿಗಳಿಗನ್ನು ತರಬೇತಿ ನೀಡಿ ತಯಾರು ಮಾಡಬೇಕು. ಕೌಶಲ್ಯಾಭಿವೃದ್ಧಿ ಅತ್ಯಗತ್ಯ ಎಂದು ಮನಗಂಡು ಈ ನಿಟ್ಟಿನಲ್ಲಿ ರಾಜ್ಯ ಅಭಿವೃದ್ಧಿಯಾಗುತ್ತಿದೆ ಎಂದರು.

ಸಂಘಟನೆಯ ದೃಷ್ಟಿಯಿಂದ ಅಮೃತ ಮಹೋತ್ಸವ ಪ್ರಮುಖವಾದ ಮೈಲಿಗಲ್ಲು

1947 ರಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಆರಾಧ್ಯ ಅವರು15 ಜನ ಸದಸ್ಯಯರನ್ನೊಳಗೊಂಡ ಈ ಸಂಸ್ಥೆಯನ್ನು ಸಣ್ಣ ಕೊಠಡಿಯೊಂದರಲ್ಲಿ ಪ್ರಾರಂಭಿಸಿದ್ದು, ಇಂದು 13 ಸಾವಿರ ಸದಸ್ಯರನ್ನು ಹೊಂದಿದೆ. ಅಮೃತ ಮಹೋತ್ಸವ ಸಮಾರಂಭದಲ್ಲಿ ಕನಿಷ್ಠ ಒಂದು ಸಾವಿರ ಜನರಾದರೂ ಭಾಗವಹಿ ಸಬೇಕಿತ್ತು ಎಂದು ಅಭಿಪ್ರಾಯ ಪಟ್ಟರು. ಸಂಘಟನೆಯ ದೃಷ್ಟಿಯಿಂದ ರಜತ, ಸುವರ್ಣ ಹಾಗೂ ಅಮೃತ ಮಹೋತ್ಸವ ಪ್ರಮುಖವಾದ ಮೈಲಿಗಲ್ಲುಗಳು. ಸಂಸ್ಥೆಯ ಸದಸ್ಯತ್ವ ಒಂದು ಲಕ್ಷಕ್ಕೆ ಏರಲಿ ಎಂದ ಮುಖ್ಯಮಂತ್ರಿಗಳು ಎಂ.ಎಸ್.ಎಂ. ಇ ಗಳು ಬೆಳೆದಂತೆಲ್ಲ ರಾಜ್ಯದ ಅಭಿವೃದ್ಧಿಯಾಗಲು ಸಾಧ್ಯ ಎಂದರು.

ಕಾಸಿಯಾ ರಾಜ್ಯದ ಅಭಿವೃದ್ಧಿಯ ಪಾಲುದಾರ
ಕಾಸಿಯಾ ಕೇವಲ ಉದ್ಯೋಗದಾತ ಮಾತ್ರವಲ್ಲದೆ ರಾಜ್ಯದ ಅಭಿವೃದ್ಧಿಯ ಪಾಲುದಾರ ಕೂಡ ಹೌದು. ರಾಜ್ಯದ ಅಭಿವೃದ್ಧಿಯಾದಂತೆ ತಲಾದಾಯ ಕೂಡ ಹೆಚ್ಚಾಗುತ್ತದೆ. ಕರ್ನಾಟಕ ಅಭಿವೃದ್ಧಿಶೀಲ ರಾಜ್ಯ. 20 ಲಕ್ಷ ಕ್ಕೂ ಹೆಚ್ಚು ಎಂ.ಎಸ್.ಎಂ. ಇ ಗಳು ಸೇರಿ 185 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಜಿಸಲಾಗಿದೆ. ಇದು ಇನ್ನೂ ಹೆಚ್ಚಾಗಬೇಕೆಂದು ಬಯಸುತ್ತೇನೆ ಎಂದರು

ಕೃಷಿ ಕ್ಷೇತ್ರವನ್ನು ಬಿಟ್ಟರೆ ಹೆಚ್ಚು ಉದ್ಯೋಗ ನೀಡುವುದು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳು
ಕರ್ನಾಟಕದಲ್ಲಿ 7 ಕೋಟಿ ಜನಸಂಖ್ಯೆ ಇದೆ. ಕೃಷಿ ಕ್ಷೇತ್ರವನ್ನು ಬಿಟ್ಟರೆ ಹೆಚ್ಚು ಉದ್ಯೋಗ ನೀಡುವುದು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳು. ಹಿಂದೆ ದಾಬಸ್ ಪೇಟೆಯಲ್ಲಿ 400 ಎಕರೆ ಕಾಸಿಯಾದವರಿಗೆ ಮಂಜೂರು ಮಾಡಿದ್ದನ್ನು ಸಿಎಂ ಸ್ಮರಿಸಿದರು. ಮಾರುಕಟ್ಟೆ ದರದ ಅರ್ಧದಷ್ಟು ದರದಲ್ಲಿ ಇದನ್ನು ಮಂಜೂರು ಮಾಡಿದ್ದು, ಕೌಶಲ್ಯ ಅಭಿವೃದ್ಧಿ ನೀಡುವ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದರು
ಸರ್ಕಾರ ಮೊದಲಿನಿಂದಲೂ ಕಾಸಿಯಾ ಸಂಸ್ಥೆಗೆ ಬೆಂಬಲ ನೀಡುತ್ತಾ ಬಂದಿದೆ. ಉತ್ಪಾದನಾ ಪ್ರಕ್ರಿಯೆಯಲ್ಲಿ ಭಾಗವಹಿಸುವವರು ರಾಷ್ಟ್ರ ನಿರ್ಮಾಣದಲ್ಲಿ ತೊಡಗಬೇಕು.ಈ ಬಗ್ಗೆ ಆಸಕ್ತಿ ಮತ್ತು ಶಕ್ತಿ ಎರಡೂ ಇರಬೇಕು ಎಂದರು.ರಾಜ್ಯದ ಜನಸಂಖ್ಯೆಯನ್ನು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬಬೇಕು.ಆಗ ಮಾತ್ರ ಸಮಾನತೆ ತರಲು ಸಾಧ್ಯ ಎಂದರು. ಅರ್ಹತೆ ಇಲ್ಲದವರಿಗೆ ತರಬೇತಿ ನೀಡಬೇಕು. ಕೆಲಸಕ್ಕೆ ಯೋಗ್ಯರನ್ನಾಗಿಸಬೇಕು. ಕರ್ನಾಟಕ ಆರ್ಥಿಕವಾಗಿ ಬೆಳವಣಿಗೆಯಾಗುತ್ತದೆ ಎಂದರು.

ರಾಜ್ಯದಿಂದ 4.50 ಲಕ್ಷ ಕೋಟಿ ತೆರಿಗೆ ಕೇಂದ್ರಕ್ಕೆ ಹೋಗುತ್ತಿದೆ. 65-70ಸಾವಿರ ಕೋಟಿ ಮಾತ್ರ ನಮಗೆ ವಾಪಸ್ಸು ಬರುತ್ತದೆ. ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿದ್ದೇವೆ ಎಂದು ರಾಜ್ಯಕ್ಕೆ ಅನ್ಯಾಯವಾಗಬಾರದು ಎಂದರು. ರಾಜ್ಯ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗುತ್ತದೆ. ರಾಜ್ಯಗಳು ಸೊರಗಿದರೆ ಕೇಂದ್ರವೂ ಸೊರಗುತ್ತದೆ ಎಂದರು. ಕೇಂದ್ರ ಸರ್ಕಾರ ಕನಿಷ್ಠ 50% ತೆರಿಗೆಯ ಪಾಲನ್ನು ರಾಜ್ಯಕ್ಕೆ ಕೊಡಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.

ಹೂಡಿಕೆಗೂ ಕಾನೂನು ಸುವ್ಯಸ್ಥೆಗೂ ನೇರವಾದ ಸಂಬಂಧವಿದೆ
ದೇಶದಲ್ಲಿ ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದರು. ರಾಜ್ಯದಲ್ಲಿ ಕೈಗಾರಿಕೆ ಬೆಳವಣಿಗೆಗೆ ಯತ್ನಿಸಲಾಗುತ್ತಿದೆ. ಕೈಗಾರಿಕೆಗಳ ಹೂಡಿಕೆಗೂ ಕಾನೂನು ಸುವ್ಯಸ್ಥೆಗೂ ನೇರವಾದ ಸಂಬಂಧವಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಣ್ಣ ಕೈಗಾರಿಕೆಗಳ ಹಾಗು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣ ಬಸಪ್ಪ ದರ್ಶನಾಪುರ, ಶಾಸಕ ರಘುಮೂರ್ತಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ , ಕಾಸಿಯಾ ಅಧ್ಯಕ್ಷ ರಾಜಗೋಪಾಲ್, ಉಪಾಧ್ಯಕ್ಷ, ಗಣೇಶ್ ರಾವ್ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

4 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

4 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

4 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

4 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

4 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

4 hours ago