ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿ ಕೋಮುದ್ವೇಷಕ್ಕೆ ಕಾರಣರಾದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮಾರ್ಚ್ 9 ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು, ಅನ್ಯ ಸಮಾಜದ ಮಹಿಳೆಯರನ್ನು ಪ್ರಿತೀಸಿ ಮದುವೆಯಾಗಿ ಎಂದು ಭಾಷಣ ಮಾಡಿದ್ದರು.
ಚಕ್ರವರ್ತಿ ಸೂಲಿಬೆಲೆ ಅವರ ಪ್ರಚೋದನಕಾರಿ ಭಾಷಣವು ರಾಜ್ಯದಲ್ಲಿ ಎರಡು ಸಮಾಜಗಳ ನಡುವಿನ ಕೋಮುದ್ವೇಷ ಹೆಚ್ಚಾಗಲು ಉತ್ತೇಜನ ನೀಡುತ್ತದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಶೀದ್ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ದೂರಿನ ಹಿನ್ನಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಎಷ್ಟು ದಿನ ನಮ್ಮ ಹುಡುಗಿಯರನ್ನೆ ನೋಡ್ತಿಯಪ್ಪ. ಅನ್ಯ ದೇಶದ ಯುವತಿಯರನ್ನು ಪ್ರಿತೀಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದರು.