ಬೆಂಗಳೂರು: ಯುಪಿಎಸ್‌ಸಿ ಪರೀಕ್ಷೆಯ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಒತ್ತಾಯದಿಂದ ಎರಡು ಬಾರಿ ಮುಂದೂಡಿಕೆ ಆಗಿದ್ದ ಪಿಎಸ್‌ಐ ಪರೀಕ್ಷೆಗೆ ಹೊಸ ದಿನಾಂಕ ನಿಗದಿಯಾಗಿದೆ.
ಅಕ್ಟೋಬರ್.3ರಂದು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿನಾಂಕ ನಿಗದಿ ಮಾಡಿದೆ.
ಅಂದು ಬೆಳಿಗ್ಗೆ 10.30 ರಿಂದ 12 ರವರೆಗೆ ಪತ್ರಿಕೆ 1 ಹಾಗೂ ಮಧ್ಯಾಹ್ನ 12.30 ರಿಂದ 2ರವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ.
ಇನ್ನು ಪಿಎಸ್‌ಐ ಪರೀಕ್ಷೆ ಜೊತೆಗೆ ವಿವಿಧ ಇಲಾಖೆಗಳ ಪರೀಕ್ಷೆಗಳಿಗೂ ಪರಿಷ್ಕೃತ ವೇಳಾಪಟ್ಟಿಯನ್ನು ಕೆಇಎ ಪ್ರಕಟಿಸಿದ್ದು, ಗ್ರಾಮ ಆಡಳಿತಾಧಿಕಾರಿಗಳು ಮತ್ತು ಜಿಟಿಟಿಸಿಯ ವಿವಿಧ ಹುದ್ದೆಗಳಿಗೆ ಸೆಪ್ಟೆಂಬರ್.29 ಮತ್ತು ಅಕ್ಟೋಬರ್.26 ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅಕ್ಟೋಬರ್.7 ರಂದು ಪರೀಕ್ಷೆ ನಡೆಯಲಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…