ಬೆಂಗಳೂರು: ನಗರ ಠಾಣೆ ಪಿಎಸ್‌ಐ ಪರಶುರಾಮ್ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಕೂಲಂಕುಶ ತನಿಖೆ ನಡೆಸುವಂತೆ ಸಿಐಡಿ ಡಿಜಿಪಿಗೆ ಗೃಹ ಇಲಾಖೆ ಪತ್ರ ಬರೆದಿದೆ.
ಪಿಎಸ್‌ಐ ಪರಶುರಾಮ್ ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದರು. ಪರಶುರಾಮ್ ಸಾವಿನ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದ್ದು, ನಗರ ಪೊಲೀಸ್ ಠಾಣೆಯಲ್ಲೇ ಮುಂದುವರಿಯಲು 30 ಲಕ್ಷ ರೂ ಹಣಕ್ಕಾಗಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಹಾಗೂ ಅವರ ಪುತ್ರ ಪಂಪನಗೌಡ ಬೇಡಿಕೆ ಇಟ್ಟಿದ್ದರು ಎಂದು ಪರಶುರಾಮ್ ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿದ್ದರು.
ಪರಶುರಾಮ್ ಕಳೆದ 7 ತಿಂಗಳಿನಿಂದ ನಗರ ಠಾಣೆಯಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ಮತ್ತೆ ಸೆನ್ ಠಾಣೆಗೆ ವರ್ಗಾವಣೆ ಮಾಡಿದ್ದರು. ಬಳಿಕ ನಗರ ಠಾಣೆಯಲ್ಲೇ ಮುಂದುವರಿಯಲು 30 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ನನ್ನ ಪತಿ ಪರಶುರಾಮ್ ತೀವ್ರ ಮನನೊಂದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇನ್ನು ಪಿಎಸ್‌ಐ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪರಶುರಾಮ್ ಸಾವಿಗೆ ಕಾರಣರಾದವರನ್ನು ಬಂಧಿಸಿ ಎಂದು ಒತ್ತಾಯಿಸಿದ್ದವು. ಈಗ ಪ್ರತಿಭಟನೆ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.
ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…
ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…
ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ ದಿನದ ಅಂಗವಾಗಿ ಸ್ವಾತಂತ್ರ್ಯಹೋರಾಟಗಾರ ತಗಡೂರು ಗಾಂಧಿ ಎಂದೇ ಖ್ಯಾತರಾಗಿದ್ದ ರಾಮಚಂದ್ರರಾಯರಿಂದ ಸ್ಥಾಪಿತವಾದ ತಗಡೂರು ಖಾದಿ ಕೇಂದ್ರದಲ್ಲಿ…