Mysore
30
scattered clouds

Social Media

ಭಾನುವಾರ, 29 ಮಾರ್ಚ್ 2026
Light
Dark

ಮೃತ ಪಿಎಸ್‌ಐ ಪರಶುರಾಮ್‌ ಕುಟುಂಬಕ್ಕೆ 50 ಲಕ್ಷ ಪರಿಹಾರ: ಸಚಿವ ಪರಮೇಶ್ವರ್‌

ಕೊಪ್ಪಳ: ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯಾದಗಿರಿ ಪಿಎಸ್‌ಐ ಪರಶುರಾಮ್‌ ಅವರ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಪರಶುರಾಮ್‌ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.

ಕಾರಟಗಿ ತಾಲ್ಲೂಕಿನ ಸೋಮನಾಶ ಗ್ರಾಮದಲ್ಲಿರುವ ಮೃತ ಪಿಎಸ್‌ಐ ಪರಶುರಾಮ್‌ ನಿವಾಸಕ್ಕೆ ಭೇಟಿ ನೀಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಶುರಾಮ್‌ ಅವರ ಸಾವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಹಾಗಾಗಿ ಅವರ ಕುಟುಂಬಸ್ಥರಿಗೆ 50 ಲಕ್ಷ ಪರಿಹಾರದ ಜೊತೆಗೆ ಪತ್ನಿಗೆ ಇಲಾಖೆಯಲ್ಲಿ ಕೆಲಸ ಕೊಡಲಾಗುವುದು.

ಇದರ ಜೊತೆಗೆ ಪರಶುರಾಮ್‌ ಪತ್ನಿ ಶಾಸಕ ಮತ್ತು ಅವರ ಪುತ್ರನ ಮೇಲೆ ಆರೋಪ ಮಾಡಿದ್ದಾರೆ. ಆರೋಪ ಸಂಬಂಧ ಆದೇಶ ಮಾಡಲಾಗಿದೆ. ಪ್ರಕರಣ ಸಂಬಂಧ ಸಿಐಡಿ ತನಿಖೆ ನಡೆಸುತ್ತಿದೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿಐಡಿ ಅಧಿಕಾರಿಗಳು ಪ್ರಕರಣ ಕುರಿತು ಗಂಭೀರ ತನಿಖೆ ಕೈಗೊಂಡಿದ್ದಾರೆ. ಇದರಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರಿಗೆ ತಕ್ಕ ಶಿಕ್ಷೆ ಆಗೇ ಆಗುತ್ತದೆ ಎಂದರು.

Tags:
error: Content is protected !!