ಕೊಪ್ಪಳ: ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯಾದಗಿರಿ ಪಿಎಸ್‌ಐ ಪರಶುರಾಮ್ ಅವರ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಪರಶುರಾಮ್ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.
ಕಾರಟಗಿ ತಾಲ್ಲೂಕಿನ ಸೋಮನಾಶ ಗ್ರಾಮದಲ್ಲಿರುವ ಮೃತ ಪಿಎಸ್‌ಐ ಪರಶುರಾಮ್ ನಿವಾಸಕ್ಕೆ ಭೇಟಿ ನೀಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಶುರಾಮ್ ಅವರ ಸಾವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಹಾಗಾಗಿ ಅವರ ಕುಟುಂಬಸ್ಥರಿಗೆ 50 ಲಕ್ಷ ಪರಿಹಾರದ ಜೊತೆಗೆ ಪತ್ನಿಗೆ ಇಲಾಖೆಯಲ್ಲಿ ಕೆಲಸ ಕೊಡಲಾಗುವುದು.
ಇದರ ಜೊತೆಗೆ ಪರಶುರಾಮ್ ಪತ್ನಿ ಶಾಸಕ ಮತ್ತು ಅವರ ಪುತ್ರನ ಮೇಲೆ ಆರೋಪ ಮಾಡಿದ್ದಾರೆ. ಆರೋಪ ಸಂಬಂಧ ಆದೇಶ ಮಾಡಲಾಗಿದೆ. ಪ್ರಕರಣ ಸಂಬಂಧ ಸಿಐಡಿ ತನಿಖೆ ನಡೆಸುತ್ತಿದೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಐಡಿ ಅಧಿಕಾರಿಗಳು ಪ್ರಕರಣ ಕುರಿತು ಗಂಭೀರ ತನಿಖೆ ಕೈಗೊಂಡಿದ್ದಾರೆ. ಇದರಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರಿಗೆ ತಕ್ಕ ಶಿಕ್ಷೆ ಆಗೇ ಆಗುತ್ತದೆ ಎಂದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…