Mysore
28
scattered clouds

Social Media

ಮಂಗಳವಾರ, 26 ಮೇ 2026
Light
Dark

ಮೃತ ಪಿಎಸ್‌ಐ ಪರಶುರಾಮ್‌ ಪತ್ನಿಗೆ ಸರ್ಕಾರಿ ಕೆಲಸ ಕೊಡಲು ತೀರ್ಮಾನ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ಬೆಂಗಳೂರು: ಮೃತ ಪಿಎಸ್‌ಐ ಪರಶುರಾಮ್‌ ಪತ್ನಿಗೆ ಸರ್ಕಾರಿ ಇಲಾಖೆಯಲ್ಲಿ ಕೆಲಸ ಕೊಡಲು ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೃತ ಪಿಎಸ್‌ಐ ಪರಶುರಾಮ್‌ ಪತ್ನಿ ಅಲ್ಲಿನ ಶಾಸಕರ ಮೇಲೆ ಆಪಾದನೆ ಮಾಡಿದ್ದಾರೆ. ಈ ಪ್ರಕರಣವನ್ನು ಸಿಐಡಿ ತನಿಖೆಗೆ ಕೊಟ್ಟಿದ್ದೇವೆ. ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಇದು ಆತ್ಮಹತ್ಯೆ ಅಲ್ಲ ಎಂದು ಇಲಾಖೆ ಹೇಳಿದೆ. ಮರಣೋತ್ತರ ಪರೀಕ್ಷೆ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯುತ್ತದೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಪರಶುರಾಮ್‌ ಪತ್ನಿಗೆ ಇಲಾಖೆಯಲ್ಲಿ ಕೆಲಸ ಹಾಗೂ ಪರಿಹಾರ ಕೊಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ತಿಳಿಸಿದರು.

 

Tags:
error: Content is protected !!