ಬೆಂಗಳೂರು- ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‍ಐ) ಹುದ್ದೆಗಳ ನೇಮಕಾತಿಗೆ ಜ.23ರಂದು ನಡೆಸಿದ್ದ ಮರುಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪತ್ರಿಕೆ-1 ಮತ್ತು 2ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಟ್ಟು 545 ಪಿಎಸ್‍ಐ ಹುದ್ದೆಗಳ ನೇಮಕಕ್ಕೆ ಕೆಇಎ ಮರು ಪರೀಕ್ಷೆ ನಡೆಸಿತ್ತು. ಅಭ್ಯರ್ಥಿಗಳು ಪಡೆದ ಅಂಕಗಳ ಮಾಹಿತಿಯನ್ನು ಸದ್ಯದಲ್ಲೇ ಗೃಹ ಇಲಾಖೆಗೆ ಸಲ್ಲಿಸಲಾಗುತ್ತದೆ. ಅದರ ನಂತರ ರೋಸ್ಟರ್ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಅವರು ಪ್ರಕಟಿಸಲಿದ್ದಾರೆ.
ಏ.18 ಮತ್ತು 19ರಂದು ನಡೆಸಲು ಉದ್ದೇಶಿಸಿರುವ ಸಿಇಟಿ ಪರೀಕ್ಷೆಗೆ ಆನ್‍ಲೈನ್ ಅರ್ಜಿ ಸಲ್ಲಿಸಲು ಮಾರ್ಚ್ 30ರ ಬೆಳಿಗ್ಗೆ 11 ಗಂಟೆಯಿಂದ ಏ.1ರ ಸಂಜೆ 4 ಗಂಟೆಯವರೆಗೆ ಮತ್ತೊಂದು ಅವಕಾಶ ಕೊಡಲಾಗಿದೆ. ಅರ್ಜಿ ಸಲ್ಲಿಸುವವರು ಏ.1ರ ರಾತ್ರಿ 8 ಗಂಟೆಯವರೆಗೂ ಶುಲ್ಕ ಪಾವತಿಸಬಹುದು.
ಈ ಅವಕಾಶವನ್ನು ಬಳಸಿಕೊಳ್ಳುವ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು. ಈ ವಿಷಯದಲ್ಲಿ ಯಾವುದೇ ತಕರಾರುಗಳಿಗೆ ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಜ.23ರಂದು 42 ನಾನಾ ವಿಷಯಗಳಿಗೆ ನಡೆಸಲಾಗಿದ್ದ ಕೆಸೆಟ್ ಪರೀಕ್ಷೆಯ ಪೈಕಿ ಆಕ್ಷೇಪಣೆಗಳು ಕಂಡುಬಂದಿದ್ದ 23 ವಿಷಯಗಳಲ್ಲಿ ಮನಃಶಾಸ್ತ್ರವನ್ನು ಹೊರತುಪಡಿಸಿ, ಮಿಕ್ಕ 22 ವಿಷಯಗಳ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ ಎಂದು ರಮ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪದವಿ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಇದು ಅರ್ಹತಾ ಪರೀಕ್ಷೆ ಆಗಿದ್ದು, ಅಭ್ಯರ್ಥಿಗಳ ಆಕ್ಷೇಪಣೆಗಳನ್ನು ಆಧರಿಸಿ, ಪರಿಷ್ಕೃತ ಕೀ ಉತ್ತರಗಳನ್ನು ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್ ಆದ ಕಬ್ಬನ್ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…
13 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…
ಕುವೈತ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್ ಮಿಶಾಲ್…
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…