ರಾಜ್ಯ

ಪಿಎಸ್‌ಐ ಮರುಪರೀಕ್ಷೆಯ ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು- ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‍ಐ) ಹುದ್ದೆಗಳ ನೇಮಕಾತಿಗೆ ಜ.23ರಂದು ನಡೆಸಿದ್ದ ಮರುಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪತ್ರಿಕೆ-1 ಮತ್ತು 2ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಟ್ಟು 545 ಪಿಎಸ್‍ಐ ಹುದ್ದೆಗಳ ನೇಮಕಕ್ಕೆ ಕೆಇಎ ಮರು ಪರೀಕ್ಷೆ ನಡೆಸಿತ್ತು. ಅಭ್ಯರ್ಥಿಗಳು ಪಡೆದ ಅಂಕಗಳ ಮಾಹಿತಿಯನ್ನು ಸದ್ಯದಲ್ಲೇ ಗೃಹ ಇಲಾಖೆಗೆ ಸಲ್ಲಿಸಲಾಗುತ್ತದೆ. ಅದರ ನಂತರ ರೋಸ್ಟರ್ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಅವರು ಪ್ರಕಟಿಸಲಿದ್ದಾರೆ.

ಏ.18 ಮತ್ತು 19ರಂದು ನಡೆಸಲು ಉದ್ದೇಶಿಸಿರುವ ಸಿಇಟಿ ಪರೀಕ್ಷೆಗೆ ಆನ್‍ಲೈನ್ ಅರ್ಜಿ ಸಲ್ಲಿಸಲು ಮಾರ್ಚ್ 30ರ ಬೆಳಿಗ್ಗೆ 11 ಗಂಟೆಯಿಂದ ಏ.1ರ ಸಂಜೆ 4 ಗಂಟೆಯವರೆಗೆ ಮತ್ತೊಂದು ಅವಕಾಶ ಕೊಡಲಾಗಿದೆ. ಅರ್ಜಿ ಸಲ್ಲಿಸುವವರು ಏ.1ರ ರಾತ್ರಿ 8 ಗಂಟೆಯವರೆಗೂ ಶುಲ್ಕ ಪಾವತಿಸಬಹುದು. ‌

ಈ ಅವಕಾಶವನ್ನು ಬಳಸಿಕೊಳ್ಳುವ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು. ಈ ವಿಷಯದಲ್ಲಿ ಯಾವುದೇ ತಕರಾರುಗಳಿಗೆ ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಜ.23ರಂದು 42 ನಾನಾ ವಿಷಯಗಳಿಗೆ ನಡೆಸಲಾಗಿದ್ದ ಕೆಸೆಟ್ ಪರೀಕ್ಷೆಯ ಪೈಕಿ ಆಕ್ಷೇಪಣೆಗಳು ಕಂಡುಬಂದಿದ್ದ 23 ವಿಷಯಗಳಲ್ಲಿ ಮನಃಶಾಸ್ತ್ರವನ್ನು ಹೊರತುಪಡಿಸಿ, ಮಿಕ್ಕ 22 ವಿಷಯಗಳ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ ಎಂದು ರಮ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪದವಿ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಇದು ಅರ್ಹತಾ ಪರೀಕ್ಷೆ ಆಗಿದ್ದು, ಅಭ್ಯರ್ಥಿಗಳ ಆಕ್ಷೇಪಣೆಗಳನ್ನು ಆಧರಿಸಿ, ಪರಿಷ್ಕೃತ ಕೀ ಉತ್ತರಗಳನ್ನು ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago