Mysore
21
overcast clouds

Social Media

ಸೋಮವಾರ, 07 ಅಕ್ಟೋಬರ್ 2024
Light
Dark

ಪಿಎಸ್‌ಐ ನೇಮಕಾತಿ: ಪರೀಕ್ಷೆ ದಿನ ಶೀಘ್ರ ನಿಗದಿ: ಜಿ.ಪರಮೇಶ್ವರ್‌

ಬೆಂಗಳೂರು: ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್(ಪಿಎಸ್‌ಐ) 402 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೆ.22ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು 28ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಆ ದಿನ ಕೂಡ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಮತ್ತೊಂದು ದಿನ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ನಾನು ಬೆಳಿಗ್ಗೆ ಮಾಧ್ಯಮದವರೊಂದಿಗೆ ಮಾತನಾಡುವಾಗ ಸೆ.28ರಂದು ಪರೀಕ್ಷೆ ನಡೆಸುವುದಾಗಿ ಹೇಳಲಾಗಿತ್ತು. ಆದರೆ ಆ ದಿನವೂ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಮತ್ತೊಂದು ದಿನಾಂಕದಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಒಂದೆರಡು ದಿನಗಳಲ್ಲಿ ಸೂಕ್ತವಾದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದಿದ್ದಾರೆ.

Tags: