ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್(ಪಿಎಸ್‌ಐ) 402 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೆ.22ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು 28ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಆ ದಿನ ಕೂಡ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಮತ್ತೊಂದು ದಿನ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ನಾನು ಬೆಳಿಗ್ಗೆ ಮಾಧ್ಯಮದವರೊಂದಿಗೆ ಮಾತನಾಡುವಾಗ ಸೆ.28ರಂದು ಪರೀಕ್ಷೆ ನಡೆಸುವುದಾಗಿ ಹೇಳಲಾಗಿತ್ತು. ಆದರೆ ಆ ದಿನವೂ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಮತ್ತೊಂದು ದಿನಾಂಕದಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಒಂದೆರಡು ದಿನಗಳಲ್ಲಿ ಸೂಕ್ತವಾದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದಿದ್ದಾರೆ.
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…
ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…