ಬೆಳಗಾವಿ : ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ 545 ಪಿಎಸ್ಐ ಹುದ್ದೆಗಳ ಮರು ಪರೀಕ್ಷೆಯನ್ನು ರಾಜ್ಯ ಸರ್ಕಾರ ಮುಂದೂಡಿದ್ದು, ಮುಂದಿನ ವರ್ಷ ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ.
545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ನೀಡಿತ್ತು. ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಇದೇ ಡಿಸೆಂಬರ್ 23ಕ್ಕೆ ಮರು ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿತ್ತು.
ಪ್ರಶ್ನೆ ಪತ್ರಿಕೆ ಸೋರಿಕೆ ಸುದ್ದಿ ಮುನ್ನಲೆಗೆ ಬರುತ್ತಿದ್ದಂತೆ ಎಚ್ಚೆತ್ತಾ ಅಂದಿನ ಬಿಜೆಪಿ ಸರ್ಕಾರ ಪರೀಕ್ಷೆಯನ್ನು ರದ್ದುಪಡಿಸಿ, ಮರು ಪರೀಕ್ಷೆ ನಡೆಸಲು ನಡೆಸಲು ನಿರ್ಧರಿಸಿತ್ತು.
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇಲ್ಲಿನ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಪಿಎಸ್ ಐ ನೇಮಕಾತಿ ಮರು ಪರೀಕ್ಷೆಯನ್ನು ಡಿ.23ರ ಬದಲು ಜ. 23ಕ್ಕೆ ಮರು ನಿಗದಿಪಡಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
2021ರ ಜನವರಿ 21ರಂದು ಪೊಲೀಸ್ ಇಲಾಖೆಯು 545 PSI ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿತ್ತು. 2021ರ ಅಕ್ಟೋಬರ್ 31ರಂದು ಲಿಖಿತ ಪರೀಕ್ಷೆ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಳಿಕ ಪರೀಕ್ಷೆ ವಿವಾದದ ಸುಳಿಯಲ್ಲಿ ಸಿಲುಕಿತ್ತು.
ಈ ಹಗರಣಕ್ಕೆ ಸಂಬಂಧಿಸಿದಂತೆ ಆಗಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪಾಲ್ ಮತ್ತು ಪೊಲೀಸ್ ಉಪ ಅಧೀಕ್ಷಕರು, ಇನ್‌ಸ್ಪೆಕ್ಟರ್, ಸಬ್ ಇನ್‌ಸ್ಪೆಕ್ಟರ್, ಸಹಾಯಕ ಸಬ್ ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ಗಳ ಶ್ರೇಣಿಯ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…